Chikkaballapur : ಚಿಕ್ಕಬಳ್ಳಾಪುರ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ಬೆಂಗಳೂರು ಕಂದಾಯ ವಿಭಾಗ ಜಿಲ್ಲೆಗಳ ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆಯನ್ನು (Agricultural Department KDP Meeting) ಕೃಷಿ ಸಚಿವ ಎನ್.ಚಲುವರಾಯಸ್ವಾಮಿ (N Cheluvarayaswamy) ನಡೆಸಿದರು.
ಸಭೆಯ ಬಳಿಕ ಮಾತನಾಡಿದ ಸಚಿವರು “ಜಿಲ್ಲೆಯಲ್ಲಿ ರಸಗೊಬ್ಬರ ಬಳಕೆಯು ರಾಷ್ಟ್ರೀಯ ಸರಾಸರಿಗಿಂತಲೂ ನಾಲ್ಕು ಪಟ್ಟು ಅಧಿಕವಾಗಿರುವುದು ಗಮನಕ್ಕೆ ಬಂದಿದ್ದು ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳು, ಜನಪ್ರತಿನಿಧಿಗಳ ಸಮ್ಮುಖದಲ್ಲಿ ರೈತರ ತಾಕುಗಳಲ್ಲಿ ಅರಿವು ಕಾರ್ಯಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯಲ್ಲಿ ಮಣ್ಣಿನ ಆರೋಗ್ಯಕ್ಕೆ ಮಾರಕವಾದ ರಸಗೊಬ್ಬರಗಳ ಬಳಕೆ ಹೆಚ್ಚಿದ್ದು ರೈತರು ಅದನ್ನು ತ್ಯಜಿಸಿ ಸಾವಯವ ಗೊಬ್ಬರ ಬಳಸಬೇಕು. ರೈತರು ಬೆಳೆ ವಿಮೆ ಮಾಡಿಸಿಕೊಳ್ಳಬೇಕು. ಆ್ಯಪ್‌ನಲ್ಲಿ ಕೃಷಿ ಬೆಳೆಗಳ ರೋಗಗಳಿಗೆ ಕೈಗೊಳ್ಳಬಹುದಾದ ಪರಿಹಾರ ಕ್ರಮಗಳನ್ನು ಪ್ರಕರಣವಾರು ರೈತರಿಗೆ ಆನ್‌ಲೈನ್ ಮೂಲಕವೇ ಒದಗಿಸಲಾಗುತ್ತಿದೆ” ಎಂದು ತಿಳಿಸಿದರು.
ಕೃಷಿ ಸಚಿವರ ಪ್ರವಾಸದ ವೇಳೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್, ಶಾಸಕ ಪ್ರದೀಪ್ ಈಶ್ವರ್, ಕೆ.ಎಚ್. ಪುಟ್ಟಸ್ವಾಮಿಗೌಡ, ಕೃಷಿ ಇಲಾಖೆ ಆಯುಕ್ತ ವೈ.ಎಸ್ ಪಾಟೀಲ್, ಜಲಾನಯನ ಇಲಾಖೆ ಆಯುಕ್ತ ಮಹೇಶ್ ಶಿರೂರು, ನಿರ್ದೇಶಕ ಪದ್ಮಯ್ಯ ನಾಯಕ್, ಕೃಷಿ ನಿರ್ದೇಶಕ ಜಿ.ಟಿ ಪುತ್ರ, ಸಾವಯವ ಕೃಷಿ ಹೆಚ್ಚುವರಿ ನಿರ್ದೇಶಕ ವೆಂಕಟರೆಡ್ಡಿ ಜೆ.ಪಾಟೀಲ್ ಸೇರಿದಂತೆ ಅನೇಕರು ಭಾಗವಹಿಸಿದರು.
For Daily Updates WhatsApp ‘HI’ to 7406303366
The post ಕೃಷಿ ಇಲಾಖೆ ಪ್ರಗತಿ ಪರಿಶೀಲನಾ ಸಭೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.