back to top
19.4 C
Bengaluru
Saturday, July 19, 2025
HomeIndiaAmbedkar ತತ್ವಗಳು ಆತ್ಮನಿರ್ಭರ್ ಭಾರತದ ನಿರ್ಮಾಣಕ್ಕೆ ಸಹಕಾರಿಯಾಗಿದೆ– PM Modi

Ambedkar ತತ್ವಗಳು ಆತ್ಮನಿರ್ಭರ್ ಭಾರತದ ನಿರ್ಮಾಣಕ್ಕೆ ಸಹಕಾರಿಯಾಗಿದೆ– PM Modi

- Advertisement -
- Advertisement -

New Delhi:: “ಡಾ.ಬಿ.ಆರ್. ಅಂಬೇಡ್ಕರ್ ಅವರ ತತ್ವಾದರ್ಶಗಳು (Dr. B.R. Ambedkar’s principles) ಆತ್ಮನಿರ್ಭರ್ ಭಾರತ (self-reliant India) ನಿರ್ಮಾಣಕ್ಕೆ ಸಹಕಾರಿಯಾಗುತ್ತವೆ” ಎಂದು ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು ಎಕ್ಸ್ (ಮಾಜಿ ಟ್ವಿಟರ್) ನಲ್ಲಿ ಪೋಸ್ಟ್ ಮಾಡಿದ್ದಾರೆ.

ಅಂಬೇಡ್ಕರ್ ಜಯಂತಿ ಅಂಗವಾಗಿ ರಾಷ್ಟ್ರಪತಿ ದ್ರೌಪದಿ ಮುರ್ಮು, ಪ್ರಧಾನಿ ಮೋದಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಮತ್ತು ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಸೇರಿದಂತೆ ಹಲವು ಗಣ್ಯರು ಸಂಸತ್ ಭವನದ ಆವರಣದಲ್ಲಿರುವ ಅಂಬೇಡ್ಕರ್ ಪ್ರತಿಮೆಗೆ ಪುಷ್ಪ ನಮನ ಸಲ್ಲಿಸಿದರು.

“ತೀವ್ರ ಸಂಕಷ್ಟಗಳ ನಡುವೆ ಅಂಬೇಡ್ಕರ್ ಅವರು ಅಪೂರ್ವ ಸಾಧನೆಗಳನ್ನು ಮಾಡಿ ಜಾಗತಿಕ ಮಟ್ಟದಲ್ಲಿ ಗೌರವ ಪಡೆದರು. ದೀನ ದಲಿತರ ಸಬಲೀಕರಣಕ್ಕೆ ಶಿಕ್ಷಣವೇ ಮುಖ್ಯ ಮಾರ್ಗ ಎಂದು ಅವರು ನಂಬಿದ್ದರು” ಎಂದು ರಾಷ್ಟ್ರಪತಿ ಮುರ್ಮು ಎಕ್ಸ್ ನಲ್ಲಿ ಬರೆದುಕೊಂಡಿದ್ದಾರೆ.

“ಅಂಬೇಡ್ಕರ್ ಅವರ ಹೋರಾಟವು ಸಂವಿಧಾನ ರಕ್ಷಣೆಗಾಗಿ ನಡೆಯುವ ಹೋರಾಟಗಳಲ್ಲಿ ಸದಾ ನಮಗೆ ಮಾರ್ಗದರ್ಶನ ನೀಡುತ್ತದೆ” ಎಂದು ರಾಹುಲ್ ಗಾಂಧಿ ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page