Home India Annamalai ಗೆ ರಾಷ್ಟ್ರೀಯ ಹುದ್ದೆ ನೀಡಲಾಗುತ್ತದೆ: Amit Shah ಹೇಳಿಕೆ

Annamalai ಗೆ ರಾಷ್ಟ್ರೀಯ ಹುದ್ದೆ ನೀಡಲಾಗುತ್ತದೆ: Amit Shah ಹೇಳಿಕೆ

220
Amit Shah and Annamalai

New Delhi: ತಮಿಳುನಾಡು BJP ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ (Annamalai) ಅವರಿಗೆ ರಾಷ್ಟ್ರಮಟ್ಟದ ಜವಾಬ್ದಾರಿಗಳನ್ನು ನೀಡಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ (Amit Shah) ತಿಳಿಸಿದ್ದಾರೆ. ಅವರು ತಮಿಳುನಾಡು ರಾಜಕೀಯದಲ್ಲಿ ಪ್ರಮುಖ ನಾಯಕತ್ವದ ಪಾತ್ರ ವಹಿಸಿದ್ದಾರೆ ಎಂದು ಶಾ ಪ್ರಶಂಸಿಸಿದ್ದಾರೆ.

ಅವರ ಸಂಘಟನಾ ಕೌಶಲ್ಯವನ್ನು ಬಿಜೆಪಿಯ ರಾಷ್ಟ್ರೀಯ ಚಟುವಟಿಕೆಗಳಲ್ಲಿ ಬಳಸಿಕೊಳ್ಳಲಾಗುತ್ತದೆ ಎಂದು ಶಾ ಎಕ್ಸ್‌ನಲ್ಲಿ ಪ್ರಕಟಿಸಿದ್ದಾರೆ. ಏಪ್ರಿಲ್‌ನಲ್ಲಿ ಅಣ್ಣಾಮಲೈ ತಮಿಳುನಾಡು ಬಿಜೆಪಿ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಬಳಿಕವೂ ಶಾ ಅವರು ಅವರ ನಾಯಕತ್ವವನ್ನು ಶ್ಲಾಘಿಸಿದ್ದರು.

ಇದೇ ವೇಳೆ, ಶಾ ಅವರು 2026ರಲ್ಲಿ ಬಿಜೆಪಿ ಹಾಗೂ ಎಐಎಡಿಎಂಕೆ ಮೈತ್ರಿಯ NDA ತಮಿಳುನಾಡಿನಲ್ಲಿ ಸರ್ಕಾರ ರಚಿಸಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮುಖ್ಯಮಂತ್ರಿ ಸ್ಥಾನಕ್ಕೆ ಎಐಎಡಿಎಂಕೆ ಪಕ್ಷದ ವ್ಯಕ್ತಿಯನ್ನು ಆಯ್ಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ. ಆದರೆ ಎಡಪ್ಪಾಡಿ ಕೆ. ಪಳನಿಸ್ವಾಮಿಯನ್ನು ನೇರವಾಗಿ ಉಲ್ಲೇಖಿಸಿದಿಲ್ಲ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page