Home Karnataka Karnatakaದಲ್ಲಿ 3 ವಿಧಾನಸಭಾ ಕ್ಷೇತ್ರಗಳ by-elections ಘೋಷಣೆ!

Karnatakaದಲ್ಲಿ 3 ವಿಧಾನಸಭಾ ಕ್ಷೇತ್ರಗಳ by-elections ಘೋಷಣೆ!

Karnataka by-elections

Karnataka : MUDA ಪ್ರಕರಣ, ವಾಲ್ಮೀಕಿ ಹಗರಣ ಸೇರಿದಂತೆ ಹಲವು ಸಂಕಷ್ಟಗಳು ಕಾಂಗ್ರೆಸ್ ಸರ್ಕಾರ ಸುತ್ತಿಕೊಂಡಿದೆ ಎಂದು ಆರೋಪಿಸಿ ವಿಪಕ್ಷ BJP ಈಗಾಗಲೇ ಸಿಎಂ ಸಿದ್ದರಾಮಯ್ಯ (CM Siddaramaiah) ರಾಜೀನಾಮೆಗೆ ಆಗ್ರಹಿಸಿ ಸತತ ಹೋರಾಟ ನಡೆಸುತ್ತಿದೆ. ಇದರ ನಡುವೆ ಕರ್ನಾಟಕದಲ್ಲಿ ಮತ್ತೆ ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದೆ.

ಹೌದು, ಮೂರು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗೆ (by-elections) ಇಂದು ಕೇಂದ್ರ ಚುನಾವಣಾ ಆಯೋಗ (Central Election Commission) ದಿನಾಂಕ ಘೋಷಿಸಲಿದೆ. ಇಂದು ಮಧ್ಯಾಹ್ನ 3.30ಕ್ಕೆ ಸುದ್ದಿಗೋಷ್ಠಿ ನಡೆಸಲಿರುವ ಚುನಾವಣಾ ಆಯೋಗ ಕರ್ನಾಟಕ 3 ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸೇರಿದಂತೆ ಮಹರಾಷ್ಟ್ರ ಹಾಗೂ ಜಾರ್ಖಂಡ್ ವಿಧಾನಸಭಾ ಚುನಾವಣೆ ದಿನಾಂಕ ಘೋಷಣೆಯಾಗಲಿದೆ.

ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ ಹಾಗೂ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಗಳಿಗೆ ಉಪ ಚುನಾವಣೆ ನಡೆಯಲಿದೆ. ಈ ಮೂರು ವಿಧಾನಸಭಾ ಚುನಾವಣೆ ದಿನಾಂಕ ಇಂದು ಆಯೋಗ ಘೋಷಿಸಲಿದೆ. ನಾಮಪತ್ರ ಸಲ್ಲಿಕೆ, ಪರಿಶೀಲನೆ, ನಾಮಪತ್ರ ಹಿಂತೆಗೆದುಕೊಳ್ಳುವಿಕೆ, ಮತದಾನ, ಮತ ಎಣಿಕೆ ದಿನಾಂಗಳು ವಿವರಣೆಯನ್ನೂ ಆಯೋಗ ನೀಡಲಿದೆ.

ಕಳೆದ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದಿಂದ ಗೆದ್ದಿದ್ದ ಹೆಚ್ಡಿ ಕುಮಾರಸ್ವಾಮಿ ಬಳಿಕ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆದ್ದಿದ್ದರು. ಹೀಗಾಗಿ ಚನ್ನಪಟ್ಟಣ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಇತ್ತ ಬಳ್ಳಾರಿಯ ಸಂಡೂರು ಕ್ಷೇತ್ರದ ಶಾಸಕ ಇ ತುಕರಾಂ, ಲೋಕಸಭಾ ಚುನಾವಣೆಯಲ್ಲಿ ಗೆದ್ದ ಬಳಿಕ ತಮ್ಮ ಶಾಸಕ ಸ್ಥಾನಕ್ಕೆ ರಾಜೀಮೆ ನೀಡಿದ್ದರು.

ಇತ್ತ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಬಸವರಾಜ್ ಬೊಮ್ಮಾಯಿ, ಲೋಕಸಭಾ ಚುನಾವಣೆಯಲ್ಲಿ ಹಾವೇರಿ ಕ್ಷೇತ್ರದಿಂದ ಗೆದ್ದು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ಹೀಗಾಗಿ ತೆರವಾಗಿರುವ ಮೂರು ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ದಿನಾಂಕ ಇಂದು ಘೋಷಣೆಯಾಗಲಿದೆ.

For Daily Updates WhatsApp ‘HI’ to 7406303366

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version