ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಟೀಮ್ ಇಂಡಿಯಾ ನಾಯಕನಾಗಿ ರೋಹಿತ್ ಶರ್ಮಾ (Rohit Sharma) ಮುಂದುವರಿಯಲಿದ್ದಾರೆ. ಜೂನ್ 20 ರಿಂದ ಆರಂಭವಾಗುವ ಈ ಸರಣಿಗಾಗಿ ಬಿಸಿಸಿಐ ಹೊಸ ನಾಯಕನ ಆಯ್ಕೆ ಮಾಡದೆ, ಹಿಟ್ಮ್ಯಾನ್ಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿದೆ.
ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಸೋಲಿನ ನಂತರ, ಟೀಮ್ ಇಂಡಿಯಾ ಟೆಸ್ಟ್ ನಾಯಕ ಬದಲಾಗಲಿದ್ದಾನೆ ಎಂಬ ಮಾತುಗಳು ಕೇಳಿಬಂದಿದ್ದವು. ಜಸ್ಪ್ರೀತ್ ಬುಮ್ರಾಗೆ ನಾಯಕತ್ವ ನೀಡುವ ಸಾಧ್ಯತೆಗಳೂ ಚರ್ಚೆಯಲ್ಲಿದ್ದವು. ಆದರೆ, ಇದೀಗ ಬಿಸಿಸಿಐ ರೋಹಿತ್ ಶರ್ಮಾಕ್ಕೆ ಮತ್ತಷ್ಟು ಅವಕಾಶ ನೀಡಲು ನಿರ್ಧರಿಸಿದೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ರೋಹಿತ್ ಶರ್ಮಾ ಉತ್ತಮ ಬ್ಯಾಟಿಂಗ್ ಮಾಡಿದ್ದಲ್ಲದೆ, ನಾಯಕನಾಗಿಯೂ ಯಶಸ್ವಿಯಾಗಿದ್ದಾರೆ. ಇದರಿಂದ, ಟೆಸ್ಟ್ ನಾಯಕತ್ವದಿಂದ ಅವರನ್ನು ಕೆಳಗಿಳಿಸುವುದು ತಪ್ಪು ಸಂದೇಶ ಕಳುಹಿಸುವಂತಾಗಬಹುದು ಎಂಬ ನಿರ್ಧಾರಕ್ಕೆ ಆಯ್ಕೆ ಸಮಿತಿ ಬಂದಿದೆ.
ಒಂದು ವೇಳೆ ರೋಹಿತ್ ಶರ್ಮಾ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ವಿಫಲರಾದರೆ, ಬಿಸಿಸಿಐ ಹೊಸ ನಾಯಕನ ಆಯ್ಕೆ ಮಾಡುವುದು ಖಚಿತ. ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಕೇವಲ 31 ರನ್ ಗಳಿಸಿದ್ದರಿಂದ, ಅವರ ಸ್ಥಾನಕ್ಕೆ ಆಪತ್ತು ಎದುರಾಗಿತ್ತು.
ಭಾರತ vs ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ
- ಮೊದಲ ಟೆಸ್ಟ್: 20-24 ಜೂನ್, 2025 – Headingley, ಲೀಡ್ಸ್
- 2ನೇ ಟೆಸ್ಟ್: 2-6 ಜುಲೈ, 2025 – Edgbaston, Birmingham
- 3ನೇ ಟೆಸ್ಟ್: 10-14 ಜುಲೈ, 2025 – ಲಾರ್ಡ್ಸ್, ಲಂಡನ್
- 4ನೇ ಟೆಸ್ಟ್: 23-27 ಜುಲೈ, 2025 – ಓಲ್ಡ್ ಟ್ರಾಫರ್ಡ್, ಮ್ಯಾಂಚೆಸ್ಟರ್
- 5ನೇ ಟೆಸ್ಟ್: 31 ಜುಲೈ-4 ಆಗಸ್ಟ್, 2025 – ದಿ ಓವಲ್, ಲಂಡನ್
ಈ 5 ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡಿದರೆ, ರೋಹಿತ್ ಶರ್ಮಾ ಟೆಸ್ಟ್ ನಾಯಕನಾಗಿ ಮುಂದುವರಿಯುವ ಸಾಧ್ಯತೆ ಇದೆ. ಇಲ್ಲವಾದರೆ, ಬಿಸಿಸಿಐ ಹೊಸ ನಾಯಕನ ಹುಡುಕಾಟ ಆರಂಭಿಸುವುದು ಖಚಿತ!