Chikkaballapur : ಚಿಕ್ಕಬಳ್ಳಾಪುರ ನಗರದಲ್ಲಿ ಜಿಲ್ಲಾಡಳಿತ ಮತ್ತು ಜಿಲ್ಲಾ ಲೋಕಾಯುಕ್ತ ಕಚೇರಿ ವತಿಯಿಂದ ಸೋಮವಾರ ‘ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ’ (Anti Corruption Awareness Week Program) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ ಪಿ.ಎನ್ ರವೀಂದ್ರ “ನಮ್ಮ ದೇಶದ ಆರ್ಥಿಕ, ರಾಜಕೀಯ ಮತ್ತು ಸಾಮಾಜಿಕ ಅಭಿವೃದ್ಧಿ ಭ್ರಷ್ಟಾಚಾರ ಆಡಚಣೆ ಆಗಿದ್ದು ಸರ್ಕಾರಿ ಕಚೇರಿಗಳಲ್ಲಿ ಸಾರ್ವಜನಿಕ ಕೆಲಸಗಳನ್ನು ನಿರ್ವಹಿಸಲು ಲಂಚಕ್ಕೆ ಬೇಡಿಕೆ, ಅಕ್ರಮ ಆಸ್ತಿ ಸಂಪಾದನೆ, ಅರ್ಜಿಗಳ ವಿಲೇವಾರಿ ಮಾಡುವಲ್ಲಿ ವಿಳಂಬ, ಸರ್ಕಾರಿ ಹಣದ ದುರುಪಯೋಗ, ಕಳಪೆ ಕಾಮಗಾರಿ ಹಾಗೂ ಇತರೆ ಯಾವುದೇ ರೀತಿಯ ಭ್ರಷ್ಟಾಚಾರದ ದೂರುಗಳಿದ್ದಲ್ಲಿ ಲೋಕಾಯುಕ್ತಕ್ಕೆ ದೂರು ನೀಡಬೇಕು” ಎಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಾಶ್ ಜಿ.ಟಿ ನಿಟ್ಟಾಲಿ, ಜಿಲ್ಲಾ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕುಶಲ್ ಚೌಕ್ಸೆ, ಚಿಕ್ಕಬಳ್ಳಾಪುರದ ಲೋಕಾಯುಕ್ತ ಎಸ್‌ಪಿ ಆಂಟೋನಿ ಜಾನ್, ಉಪವಿಭಾಗಾಧಿಕಾರಿ ಡಿ.ಎಚ್.ಅಶ್ವಿನ್, ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಭ್ರಷ್ಟಾಚಾರದ ವಿರುದ್ಧ ಜಾಗೃತಿ ಅರಿವು ಸಪ್ತಾಹ ಕಾರ್ಯಕ್ರಮ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.