New Delhi, India : ಭಾರತ ದೇಶದ ಮಾಜಿ ಪ್ರಧಾನಿ ಮತ್ತು ಬಿಜೆಪಿಯ ಧೀಮಂತ ನಾಯಕ ಅಟಲ್ ಬಿಹಾರಿ ವಾಜಪೇಯಿ (Atal Bihari Vajpayee) ಅವರ 97ನೇ ಜನ್ಮದಿನದ ಅಂಗವಾಗಿ ಶನಿವಾರ ಪ್ರಧಾನಿ ನರೇಂದ್ರ ಮೋದಿ (Narendra Modi) ವಾಜಪೇಯಿ ಅವರ ಸಮಾಧಿಗೆ ತೆರಳಿ ಶ್ರದ್ಧಾಂಜಲಿ ಸಲ್ಲಿಸಿದರು. ರಾಷ್ಟ್ರಪತಿ ರಾಮನಾಥ್ ಕೋವಿಂದ್ (President Ram Nath Kovind), ಲೋಕಸಭೆ ಸ್ಪೀಕರ್ ಓಂ ಬಿರ್ಲಾ (Lok Sabha Speaker Om Birla) ಮತ್ತು ಗೃಹ ಸಚಿವ ಅಮಿತ್ ಶಾ (Home Minister Amit Shah) ಸಹ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದರು.
1924 ರಲ್ಲಿ ಗ್ವಾಲಿಯರ್‌ನಲ್ಲಿ (Gwalior) ಜನಿಸಿದ ಅಟಲ್ ಬಿಹಾರಿ ವಾಜಪೇಯಿ ಅವರು, ಪೂರ್ಣಾವಧಿ ಅಧಿಕಾರವನ್ನು ಪೂರೈಸಿದ ಮೊದಲ ಕಾಂಗ್ರೆಸ್ಸೇತರ ಪ್ರಧಾನಿಯಾಗಿದ್ದರು. ಅವರ ದಕ್ಷ ಆಡಳಿತದ ನೆನಪಿನಲ್ಲಿ ವಾಜಪೇಯಿ ಅವರ ಜನ್ಮದಿನವನ್ನು ದೇಶದಲ್ಲಿ ಉತ್ತಮ ಆಡಳಿತ ದಿನವಾಗಿ (Good Governance Day) ಆಚರಿಸಲಾಗುತ್ತಿದೆ.
ವಾಜಪೇಯಿ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿದ ಪ್ರಧಾನಿ ನರೇಂದ್ರ ಮೋದಿ, “ಅಟಲ್ ಜಿ ಅವರನ್ನು ಅವರ ಜಯಂತಿಯಂದು ಸ್ಮರಿಸುತ್ತಿದ್ದೇನೆ. ದೇಶಕ್ಕೆ ಅವರ ಶ್ರೀಮಂತ ಸೇವೆಯಿಂದ ನಾವು ಸ್ಫೂರ್ತಿ ಪಡೆದಿದ್ದೇವೆ. ಭಾರತವನ್ನು ಬಲಿಷ್ಠ ಮತ್ತು ಅಭಿವೃದ್ಧಿಗೊಳಿಸಲು ಅವರು ತಮ್ಮ ಜೀವನವನ್ನು ಮುಡಿಪಾಗಿಟ್ಟರು. ಅವರ ಅಭಿವೃದ್ಧಿ ಕಾರ್ಯಗಳು ಲಕ್ಷಾಂತರ ಭಾರತೀಯರ ಮೇಲೆ ಧನಾತ್ಮಕವಾಗಿ ಪ್ರಭಾವ ಬೀರಿವೆ” ಎಂದು ತಿಳಿಸಿದರು.