![Arvind Kejriwal Arvind Kejriwal](https://kannadatopnews.com/wp-content/uploads/2025/01/copy.jpg)
ದೆಹಲಿಯ ಮಾಜಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಮೇಲೆ ದಾಳಿ ನಡೆಸಲು ಖಲಿಸ್ತಾನಿ ಉಗ್ರರು ಸಂಚು ರೂಪಿಸಿದ್ದಾರೆ ಎಂಬ ಮಾಹಿತಿ ಗುಪ್ತಚರ ಸಂಸ್ಥೆಗಳ ಮೂಲಕ ಲಭ್ಯವಾಗಿದೆ. ದೆಹಲಿ ವಿಧಾನಸಭಾ ಚುನಾವಣೆಯ ಸಮಯದಲ್ಲಿ ಅರವಿಂದ್ ಕೇಜ್ರಿವಾಲ್ ಮತ್ತು ಇತರ ನಾಯಕರ ಮೇಲೆ ದಾಳಿ ಸಂಭವಿಸಬಹುದೆಂದು ಎಚ್ಚರಿಕೆ ನೀಡಲಾಗಿದೆ.
ದೆಹಲಿಯ ಶಾಂತಿ ಹಾಳು ಮಾಡಲು ಉಗ್ರರು ನಾಯಕರ ಮೇಲೆ ದಾಳಿ ಮಾಡಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಈ ಸಂಬಂಧ ದೆಹಲಿ ಪೊಲೀಸರು ಮತ್ತು ಗುಪ್ತಚರ ಸಂಸ್ಥೆಗಳ ನಡುವೆ ಮಾಹಿತಿ ಹಂಚಿಕೊಂಡಿದ್ದಾರೆ. ಕೇಜ್ರಿವಾಲ್ ಅವರಿಗೆ ಝಡ್ ಕೆಟಗರಿ ಭದ್ರತೆ ಒದಗಿಸಲಾಗಿದ್ದು, ರ್ಯಾಲಿ ಮತ್ತು ಸಾರ್ವಜನಿಕ ಸಭೆಗಳಲ್ಲಿ ಭದ್ರತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.
ಫೆಬ್ರವರಿ 5ರಂದು ದೆಹಲಿಯ ವಿಧಾನಸಭಾ ಚುನಾವಣೆ ನಡೆಯಲಿದ್ದು, ಪ್ರಸ್ತುತ 85 ನಾಮಪತ್ರಗಳು ಸಲ್ಲಿಕೆಯಾಗಿವೆ. ಫೆಬ್ರವರಿ 8ರಂದು ಫಲಿತಾಂಶ ಪ್ರಕಟವಾಗಲಿದೆ.
ಅರವಿಂದ್ ಕೇಜ್ರಿವಾಲ್ ಅವರ ಮೇಲೆ ಇದಕ್ಕೂ ಮೊದಲು ನಡೆದ ದಾಳಿಗಳಾದ ಕೆಲವು ಪ್ರಮುಖ ಘಟನೆಗಳು.
2019: ಮೆ ಮಾತ್ರ ರಾಜಕೀಯ ಕಾರ್ಯಕ್ರಮದ ವೇಳೆ ವ್ಯಕ್ತಿಯೊಬ್ಬ ಕಪಾಳಮೋಕ್ಷ ಮಾಡಿದ ಘಟನೆ.
2018: ಮೆಣಸಿನ ಪುಡಿ ದಾಳಿ.
2016: ಪಂಜಾಬ್ ಲುಧಿಯಾನಾದಲ್ಲಿ ಕಾರಿನ ಮೇಲೆ ಕಬ್ಬಿಣದ ರಾಡ್ ದಾಳಿ.
2014: ದೆಹಲಿಯ ರೋಡ್ ಶೋ ವೇಳೆ ಮೊಟ್ಟೆ ಮತ್ತು ಶಾಯಿ ಎಸೆದು ಕಪಾಳಮೋಕ್ಷ.
ಕೇಜ್ರಿವಾಲ್ ಸೇರಿದಂತೆ ಪ್ರಮುಖ ನಾಯಕರು ತಮ್ಮ ಕಾರ್ಯಕ್ರಮಗಳ ವೇಳೆಯಲ್ಲಿ ಹೆಚ್ಚುವರಿ ಭದ್ರತೆ ವ್ಯವಸ್ಥೆಯನ್ನು ಹೊಂದಿದ್ದಾರೆ. ಈ ಆಧಾರದ ಮೇಲೆ ಕಾಲಕಾಲಕ್ಕೆ ಭದ್ರತಾ ಪರಿಶೀಲನೆ ನಡೆಯುತ್ತಿದೆ.