
ಛತ್ರಪತಿ ಸಂಭಾಜಿ ಮಹಾರಾಜರ ಜೀವನಾಧಾರಿತ ‘Chhava’ ಸಿನಿಮಾ ಬಿಡುಗಡೆಯಾದ ಬಳಿಕ ದೇಶದಲ್ಲಿ ಭಾರೀ ಚರ್ಚೆಯಾಗುತ್ತಿದೆ. ಈ ಐತಿಹಾಸಿಕ ಚಿತ್ರವು ಸಂಭಾಜಿ ಮಹಾರಾಜರ ಶೌರ್ಯವನ್ನು ಪ್ರದರ್ಶಿಸುವ ಮೂಲಕ ಯುವ ಪೀಳಿಗೆಗೆ ಸ್ಫೂರ್ತಿ ನೀಡುತ್ತಿದೆ.
ಈ ಚಿತ್ರದ ಹಿನ್ನೆಲೆಯಲ್ಲಿ ಕೆಲವೊಂದು ಕಡೆ ಶಾಲಾ ಪಠ್ಯಪುಸ್ತಕಗಳಲ್ಲಿ ಭಾರತೀಯ ಇತಿಹಾಸದ ಚಿತ್ರಣದ ಬಗ್ಗೆ ವಿವಾದ ಉದ್ಭವಿಸಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ಹೊಸ ಚರ್ಚೆಗಳು ಪ್ರಾರಂಭವಾಗಿವೆ.
ಮಹಾರಾಷ್ಟ್ರ ಸಮಾಜವಾದಿ ಪಕ್ಷದ ಅಧ್ಯಕ್ಷ ಅಬು ಅಜ್ಮಿ, (Samajwadi Party President Abu Azmi) ಮೊಘಲ್ ಚಕ್ರವರ್ತಿ ಔರಂಗಜೇಬನ ಬಗ್ಗೆ ನೀಡಿದ ಹೇಳಿಕೆಗಳ ಮೂಲಕ ಹೊಸ ವಿವಾದ ಸೃಷ್ಟಿಸಿದ್ದಾರೆ. ಅವರ ಪ್ರಕಾರ, ಔರಂಗಜೇಬ್ ಕ್ರೂರನಲ್ಲ, ಬದಲಾಗಿ ಹಿಂದೂ ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ “ನ್ಯಾಯಯುತ ರಾಜ” ಎಂದು ಅವರು ಪ್ರತಿಪಾದಿಸಿದ್ದಾರೆ.