Search
WhatsApp alerts

Home › News

WTC ಫೈನಲ್‌ಗಾಗಿ Australia ಬಲಿಷ್ಠ ತಂಡ ಪ್ರಕಟ

administrator · Published

Australia Team

2025ರ ಜೂನ್ 11 ರಿಂದ 15ರ ವರೆಗೆ ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) ಫೈನಲ್ ಪಂದ್ಯ ನಡೆಯಲಿದೆ. ಈ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ಹಾಗೂ ಆಸ್ಟ್ರೇಲಿಯಾ (Australia) ತಂಡಗಳು ಪರಸ್ಪರ ಸೆಣಸಾಡಲಿವೆ.

ದಕ್ಷಿಣ ಆಫ್ರಿಕಾ 12 ಟೆಸ್ಟ್ ಪಂದ್ಯಗಳಲ್ಲಿ 8 ಗೆದ್ದಿದ್ದು ಶೇಕಡಾ 69.44 ಅಂಕಗಳೊಂದಿಗೆ ಮೊದಲ ಸ್ಥಾನದಲ್ಲಿದೆ. ಆಸ್ಟ್ರೇಲಿಯಾ 19 ಪಂದ್ಯಗಳಲ್ಲಿ 13 ಗೆದ್ದಿದ್ದು ಶೇಕಡಾ 67.54 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿದೆ.

ಇವತ್ತು ಕ್ರಿಕೆಟ್ ಆಸ್ಟ್ರೇಲಿಯಾ ತನ್ನ ಬಲಿಷ್ಠ ತಂಡವನ್ನು ಪ್ರಕಟಿಸಿದೆ. ಗಾಯಗೊಂಡಿದ್ದ ಕ್ಯಾಮರೂನ್ ಗ್ರೀನ್ ಇದೀಗ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದಾರೆ. ಸ್ಪಿನ್ನರ್ ಮ್ಯಾಟ್ ಕುನೆಮನ್ ತಂಡದಲ್ಲಿ ಸೇರಿದ್ದಾರೆ. ಬ್ರೆಂಡನ್ ಡಾಗೆಟ್ ಮೀಸಲು ಆಟಗಾರನಾಗಿ ಆಯ್ಕೆಯಾಗಿದ್ದಾರೆ.

ಪ್ಯಾಟ್ ಕಮ್ಮಿನ್ಸ್ ಹಾಗೂ ಜೋಶ್ ಹ್ಯಾಜಲ್ವುಡ್ ಅವರು ಪೂರ್ತಿಯಾಗಿ ಚೇತರಿಸಿಕೊಂಡು ಇದೀಗ ಮತ್ತೆ ತಂಡದ ಭಾಗವಾಗಿದ್ದಾರೆ.

ಆಸ್ಟ್ರೇಲಿಯಾ ಫೈನಲ್ ತಂಡ: ಪ್ಯಾಟ್ ಕಮ್ಮಿನ್ಸ್ (ನಾಯಕ), ಸ್ಕಾಟ್ ಬೋಲ್ಯಾಂಡ್, ಅಲೆಕ್ಸ್ ಕ್ಯಾರಿ, ಕ್ಯಾಮರೂನ್ ಗ್ರೀನ್, ಜೋಶ್ ಹ್ಯಾಜಲ್ವುಡ್, ಟ್ರಾವಿಸ್ ಹೆಡ್, ಜೋಶ್ ಇಂಗ್ಲಿಸ್, ಉಸ್ಮಾನ್ ಖವಾಜಾ, ಸ್ಯಾಮ್ ಕಾನ್ಸ್ಟಾಸ್, ಮ್ಯಾಟ್ ಕುನೆಮನ್, ಮಾರ್ನಸ್ ಲ್ಯಾಬುಶೇನ್, ನಾಥನ್ ಲಿಯಾನ್, ಸ್ಟೀವ್ ಸ್ಮಿತ್, ಮಿಚೆಲ್ ಸ್ಟಾರ್ಕ್, ಬ್ಯೂ ವೆಬ್ಸ್ಟರ್. ಮೀಸಲು ಆಟಗಾರ: ಬ್ರೆಂಡನ್ ಡಾಗೆಟ್.

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page