Chikkaballapur : ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಸಂವಿಧಾನ ಶಿಲ್ಪಿ ಬಿ.ಆರ್.ಅಂಬೇಡ್ಕರ್ (B. R. Ambedkar) ಮತ್ತು ಹಸಿರು ಕ್ರಾಂತಿ ಹರಿಕಾರ ಬಾಬೂ ಜಗಜೀವನ ರಾಂ (Babu Jagjivan Ram) ಅವರ ಜಯಂತಿಯನ್ನು ಸೋಮವಾರ ಅದ್ಧೂರಿಯಾಗಿ ಸಂಭ್ರಮದಿಂದ ಆಚರಿಸಲಾಯಿತು.

ಚಿಕ್ಕಬಳ್ಳಾಪುರ ನಗರದ ಪ್ರಮುಖ ರಸ್ತೆಗಳಲ್ಲಿ ಅಂಬೇಡ್ಕರ್ ಅವರ ಸ್ತಬ್ಧಚಿತ್ರಗಳು, ಪಲ್ಲಕ್ಕಿಗಳು ಕಲಾತಂಡಗಳೊಂದಿಗೆ ಅದ್ದೂರಿ ಮೆರವಣಿಗೆ ನಡೆಸಲಾಯಿತು.
ಚಿಂತಾಮಣಿ :
ಚಿಂತಾಮಣಿ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಸೋಮವಾರ ಚಿಂತಾಮಣಿ ನಗರದಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಮತ್ತು ಬಾಬು ಜಗಜೀವನರಾಂ ಜಯಂತಿಯನ್ನು ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಉದ್ಘಾಟಿಸಿದರು.
ಶಿಡ್ಲಘಟ್ಟ :
ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸೋಮವಾರ ಶಿಡ್ಲಘಟ್ಟ ನಗರದಲ್ಲಿ ಹಮ್ಮಿಕೊಂಡಿದ್ದ ಡಾ.ಬಿ.ಆರ್.ಅಂಬೇಡ್ಕರ್, ಡಾ.ಬಾಬು ಜಗಜೀವನ್ ರಾಂ ಜಯಂತ್ಯುತ್ಸವ ಹಾಗೂ ಅಂಬೇಡ್ಕರ್ ಭವನ, ಶಿಕ್ಷಕರ ಭವನ ಹಾಗೂ ಸರ್ಕಾರಿ ನೌಕರರ ಭವನ ನಿರ್ಮಾಣಕ್ಕೆ ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ.ಸುಧಾಕರ್ ಮತ್ತು ಶಾಸಕ ಬಿ.ಎನ್.ರವಿಕುಮಾರ್ ಭೂಮಿ ಪೂಜೆ ನೆರವೇರಿಸಿದರು.
ಗೌರಿಬಿದನೂರು :
ಗೌರಿಬಿದನೂರು ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ನಗರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಡಾ.ಬಿ.ಆರ್.ಅಂಬೇಡ್ಕ ಅವರ 134ನೇ ಜಯಂತೋತ್ಸವ ಮತ್ತು ಡಾ.ಬಾಬು ಜಗಜೀವನ್ ರಾಂ 118ನೇ ಜಯಂತೋತ್ಸವ ವೈಭವದಿಂದ ಆಚರಿಸಲಾಯಿತು.
ಬಾಗೇಪಲ್ಲಿ :
ಬಾಗೇಪಲ್ಲಿ ಪಟ್ಟಣದ ಸರ್ಕಾರಿ ಬಾಲಕಿಯರ ಶಾಲಾವರಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಸಂವಿಧಾನ ಶಿಲ್ಪಿ ಡಾ.ಅಂಬೇಡ್ಕರ್ ಜಯಂತಿ ಹಾಗೂ ಬಾಬು ಜಗಜೀವನ ರಾಂ ಜಯಂತಿ ಆಚರಿಸಲಾಯಿತು.
ಗುಡಿಬಂಡೆ :
ಗುಡಿಬಂಡೆ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಪಟ್ಟಣ ಪಂಚಾಯಿತಿ ಹಾಗೂ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಅಂಬೇಡ್ಕರ್ ಜನ್ಮದಿನಾಚರಣೆ ಹಾಗೂ ಹಸಿರು ಕ್ರಾಂತಿ ಹರಿಕಾರ ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್ ರಾಂ ಅವರ 118ನೇ ಜನ್ಮ ದಿನಾಚರಣೆ ನಡೆಸಲಾಯಿತು.
ಚೇಳೂರು :
ಚೇಳೂರು ತಾಲ್ಲೂಕು ಆಡಳಿತ, ಸಮಾಜ ಕಲ್ಯಾಣ ಇಲಾಖೆ , ಗ್ರಾಮ ಪಂಚಾಯಿತಿ ಹಾಗೂ ದಲಿತ ಸಂಘಟನೆಗಳ ಆಶ್ರಯದಲ್ಲಿ ಅದ್ದೂರಿ ಯಾಗಿ ಅಂಬೇಡ್ಕರ್ ಜಯಂತಿ ಆಚರಿಸಲಾಯಿತು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ ಬಿ.ಆರ್.ಅಂಬೇಡ್ಕರ್, ಬಾಬು ಜಗಜೀವನ ರಾಂ ಜಯಂತಿ ಆಚರಣೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.