
Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಆಶ್ರಯದಲ್ಲಿ ಭಾನುವಾರ ನಗರದ ಅಂಬೇಡ್ಕರ್ ಭವನದಲ್ಲಿ ಬಾಬು ಜಗಜೀವನರಾಮ್ (Babu Jagjivan Ram) ಅವರ 39ನೇ ಪುಣ್ಯಸ್ಮರಣೆ (Death Anniversary) ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ವೈ.ನವೀನ್ ಭಟ್ ಮಾತನಾಡಿ ” ಜನರ ಒಳಿತಾಗಿ ಕ್ರಾಂತಿಕಾರಿ ನಿಲುವು ಮತ್ತು ಅಭಿವೃದ್ಧಿಗಾಗಿ ಒಲವು ಎರಡನ್ನೂ ಮೈಗೂಡಿಸಿಕೊಂಡಿದ್ದ ಅಪ್ರತಿಮ ನಾಯಕ ಮಾಜಿ ಉಪಪ್ರಧಾನಿ, ಹಸಿರು ಕ್ರಾಂತಿಯ ಹರಿಕಾರ ಬಾಬು ಜಗಜೀವನರಾಮ್ ರವರು. ಸ್ವಾತಂತ್ರ್ಯ ಪೂರ್ವದಲ್ಲಿ ದಲಿತರಿಗೆ ಆಗುತ್ತಿರುವ ಅನ್ಯಾಯ, ದೌರ್ಜನ್ಯ, ಶೋಷಣೆ ವಿರುದ್ಧ ಧ್ವನಿ ಎತ್ತಿದವರು ಬಾಬೂಜಿ ಮತ್ತು ಅಂಬೇಡ್ಕರ್. 1917-1920 ವೇಳೆ ಆಲ್ ಇಂಡಿಯಾ ಡಿಪ್ರೆಸೆಡ್ ಕ್ಲಾಸೆಸ್ ಫೆಡರೇಶನ್ ಸ್ಥಾಪಿಸಿದರು. ಅಂಬೇಡ್ಕರ್ ಅವರ ಕಾರ್ಯ, ನಿಲುವುಗಳಿಗೆ ಬಾಬೂಜಿ ಬೆಂಬಲವಾಗಿದ್ದರು. ಕಾರ್ಮಿಕ ಸಚಿವ, ರಕ್ಷಣಾ ಸಚಿವ, ಕೃಷಿ ಸಚಿವರಾಗಿ ದೇಶಕ್ಕೆ ತಮ್ಮದೇ ಆದ ಕೊಡುಗೆ ನೀಡಿದರು. 40 ವರ್ಷ ಒಂದೇ ಲೋಕಸಭಾ ಕ್ಷೇತ್ರದಿಂದ ಗೆಲುವು ಸಾಧಿಸಿದ್ದರು. ಅವರ ನಿಧನ ನಂತರ ಅವರ ಪುತ್ರಿ ಮೀರಾ ಕುಮಾರಿ ಎರಡು ಬಾರಿ ಅದೇ ಕ್ಷೇತ್ರದಲ್ಲಿ ಸಂಸದರಾಗಿ ಆಯ್ಕೆಯಾದರು” ಎಂದು ತಿಳಿಸಿದರು.
ಉಪ ವಿಭಾಗಾಧಿಕಾರಿ ಡಿ.ಎಚ್ ಅಶ್ವಿನ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ತೇಜಾನಂದ ರೆಡ್ಡಿ, ಸಹಾಯಕ ನಿರ್ದೇಶಕ ಶೇಷಾದ್ರಿ, ವೃತ್ತ ನಿರೀಕ್ಷಕ ಮಂಜುನಾಥ್, ವಿವಿಧ ಸಮುದಾಯದ ಮುಖಂಡರು, ಸಂಘ ಸಂಸ್ಥೆಗಳ ಪದಾಧಿಕಾರಿಗಳು, ವಿವಿಧ ಇಲಾಖೆಯ ಅಧಿಕಾರಿಗಳು, ವಿದ್ಯಾರ್ಥಿಗಳು ಈ ಸಂದರ್ಭದಲ್ಲಿ ಪಾಲ್ಗೊಂಡಿದ್ದರು.
ಗೌರಿಬಿದನೂರು:

ಗೌರಿಬಿದನೂರು ತಾಲ್ಲೂಕು ಆಡಳಿತ ಮತ್ತು ಸಮಾಜ ಕಲ್ಯಾಣ ಇಲಾಖೆಯಿಂದ ನಗರದ ಸಮಾನತಾ ಸೌಧದ ಡಾ.ಬಿ.ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರದಲ್ಲಿ ಭಾನುವಾರ ಬಾಬು ಜಗಜೀವನ್ ರಾಂ ಪುಣ್ಯಸ್ಮರಣೆ ನಡೆಯಿತು.
For Daily Updates WhatsApp ‘HI’ to 7406303366
The post ಬಾಬು ಜಗಜೀವನರಾಮ್ ಪುಣ್ಯಸ್ಮರಣೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.







