Bagepalli : ಬಾಗೇಪಲ್ಲಿ ತಾಲ್ಲೂಕಿನ ದೇವರಗುಡಿಪಲ್ಲಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗುರುವಾರ 71ನೇ ಅಖಿಲ ಭಾರತ ಸಹಕಾರ ಸಪ್ತಾಹ (All India Co Operative Week) ಕಾರ್ಯಕ್ರಮ ನಡೆಸಲಾಯಿತು.
ಕಾರ್ಯಕ್ರಮದಲ್ಲಿ ಮಾತನಾಡಿದ ಜಿಲ್ಲಾ ಸಹಕಾರ ಒಕ್ಕೂಟದ ಅಧ್ಯಕ್ಷ ಎಚ್.ವಿ. ನಾಗರಾಜು,”ಪ್ರತಿ ವರ್ಷ ನೆಹರೂ ಅವರ ಜನ್ಮ ದಿನವಾದ ನ.14ರಿಂದ 20 ರವರೆಗೆ ರಾಷ್ಟ್ರದಾದ್ಯಂತ ಅಖಿಲ ಭಾರತ ಸಹಕಾರ ಸಪ್ತಾಹ ನಡೆಯುತ್ತದೆ. ಸಹಕಾರ ಸಂಘಗಳು ವ್ಯವಸಾಯ ಕ್ಷೇತ್ರದ ಅಭಿವೃದ್ಧಿಯಲ್ಲಿ ನಿರ್ಣಾಯಕ ಪಾತ್ರ ವಹಿಸುತ್ತವೆ” ಎಂದು ತಿಳಿಸಿದರು.
ಕೋಚಿಮುಲ್ ಮಾಜಿ ಅಧ್ಯಕ್ಷ ವಿ.ಮಂಜುನಾಥ ರೆಡ್ಡಿ, ಸಹಕಾರ ಸಂಘದ ಪದಾಧಿಕಾರಿಗಳಾದ ಅಮರ್, ಕೆ.ಎನ್.ಲಕ್ಷ್ಮಿಪತಿ, ಪ್ರಭಾಕರ್ ರೆಡ್ಡಿ, ಚಂದ್ರಶೇಖರ ರೆಡ್ಡಿ, ಲಕ್ಷ್ಮಿದೇವಮ್ಮ, ಶಂಕರ್, ಶ್ರೀನಿವಾಸ್ ಗೌಡ ಮತ್ತಿತರರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post 71ನೇ ಅಖಿಲ ಭಾರತ ಸಹಕಾರ ಸಪ್ತಾಹ ಕಾರ್ಯಕ್ರಮ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.