back to top
27 C
Bengaluru
Wednesday, September 17, 2025
HomeKarnatakaChikkaballapuraಬೈಕ್ ಕಾರು ಡಿಕ್ಕಿ: ಬೈಕ್ ಸವಾರ ಸಾವು

ಬೈಕ್ ಕಾರು ಡಿಕ್ಕಿ: ಬೈಕ್ ಸವಾರ ಸಾವು

- Advertisement -
- Advertisement -

Bagepalli : ಬಾಗೇಪಲ್ಲಿ ಪಟ್ಟಣದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ರಸ್ತೆ ಸುಂಕಲಮ್ಮ ದೇವಾಲಯದ ಮುಂದೆ ದ್ವಿಚಕ್ರ ವಾಹನಕ್ಕೆ ಕಾರು ಡಿಕ್ಕಿ (Bike Car Accident) ಹೊಡೆದ ಪರಿಣಾಮ ದ್ವಿಚಕ್ರ ವಾಹನ ಸವಾರ ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಘಟನೆಯಲ್ಲಿ ದೇವರೆಡ್ಡಿಪಲ್ಲಿ ಗ್ರಾಮದ ಜಯರಾಮರೆಡ್ಡಿ (63) ಮೃತಪಟ್ಟಿದ್ದು ಅವರು ಪಟ್ಟಣದಿಂದ ಸ್ವಗ್ರಾಮಕ್ಕೆ ದ್ವಿಚಕ್ರ ವಾಹನದಲ್ಲಿ ಸಂಚರಿಸುವಾಗ ಬೆಂಗಳೂರಿನಿಂದ ಹೈದರಾಬಾದ್ ಕಡೆಗೆ ಸಂಚರಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ತೀವ್ರ ರಕ್ತಸ್ರಾವಗೊಂಡಿದ್ದ ಅವರನ್ನು ಕೂಡಲೇ ಕಾರಿನವರು ಬಾಗೇಪಲ್ಲಿ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗೆ ಬೆಂಗಳೂರಿನ ಆಸ್ಪತ್ರೆಗೆ ಸಾಗಿಸುವ ಮಾರ್ಗದಲ್ಲಿ ಜಯ ರಾಮರೆಡ್ಡಿ ಅವರು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ಬಾಗೇಪಲ್ಲಿ ಸರ್ಕಲ್ ಇನ್‌ಸ್ಪೆಕ್ಟರ್‌ ಪ್ರಶಾಂತ್ ಆರ್.ವರ್ಣಿ ಭೇಟಿ ನೀಡಿ ಪರಿಶೀಲಿಸಿ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

For Daily Updates WhatsApp ‘HI’ to 7406303366

The post ಬೈಕ್ ಕಾರು ಡಿಕ್ಕಿ: ಬೈಕ್ ಸವಾರ ಸಾವು appeared first on Chikkaballapur.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page