
Bagepalli : ಬಾಗೇಪಲ್ಲಿ ಸಿಪಿಎಂ ಕಚೇರಿಯಲ್ಲಿ ಸಿಪಿಎಂ ತಾಲ್ಲೂಕು ಸಮಿತಿ ಪದಾಧಿಕಾರಿಗಳಿಂದ ಸುದ್ದಿಗೋಷ್ಠಿ (Press Meet) ಹಮ್ಮಿಕೊಳ್ಳಲಾಗಿತ್ತು.
ಸುದ್ಧಿಗಾರರೊಂದಿಗೆ ಮಾತನಾಡಿದ ಸಿಪಿಎಂ ತಾಲ್ಲೂಕು ಕಾರ್ಯದರ್ಶಿ ಎಂ.ಎನ್.ರಘುರಾಮರೆಡ್ಡಿ “ಬಾಗೇಪಲ್ಲಿ ತಾಲ್ಲೂಕಿನಲ್ಲಿ ಸಿಪಿಎಂ ಪಕ್ಷವನ್ನು ಸಂಘಟಿಸಿ, ಪರ್ಯಾಯ ರಾಜಕೀಯ ಶಕ್ತಿಯಾಗಿ ರೂಪಿಸಲಾಗುವುದು, ಶಾಶ್ವತ ನೀರಾವರಿ ಸಮಸ್ಯೆಗೆ ಪರಿಹಾರ ಸೇರಿದಂತೆ 23 ನಿರ್ಣಯಗಳನ್ನು ತಾಲ್ಲೂಕು ಸಮ್ಮೇಳನದಲ್ಲಿ ಮಾಡಲಾಗಿದೆ. ಈ ನಿರ್ಣಯಗಳ ಅಡಿಯಲ್ಲಿ ಪಕ್ಷ ಸಂಘಟನೆ ಮತ್ತು ಹೋರಾಟ ನಡೆಯಲಿದೆ. ಸರ್ಕಾರ ಕೂಡಲೇ ಚೇಳೂರು ತಾಲ್ಲೂಕು ಅಧಿಕಾರಿಗಳನ್ನು, ಸಿಬ್ಬಂದಿಯನ್ನು ನೇಮಕ ಮಾಡಬೇಕು . ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಸಾಗುವಳಿ ಹಕ್ಕು ಪತ್ರಗಳನ್ನು ವಿತರಣೆ, ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಕೃಷಿ ಕೂಲಿಕಾರ್ಮಿಕರಿಗೆ, ಸಾಮಾನ್ಯ ಜನರಿಗೆ ಸಾಲ, ರೈತರ ಸಾಲ ಮನ್ನಾ, ಮಸಣ ಕಾರ್ಮಿಕರಿಗೆ ಸೇವಾ ಭದ್ರತೆ, ಕನಿಷ್ಠ ವೇತನ, ಕೃಷಿ ಆಧಾರಿತ ಭೂಮಿಗಳನ್ನು ರಕ್ಷಣೆ ಮಾಡಬೇಕು. ಗ್ರಾಮೀಣ ಪ್ರದೇಶಗಳಿಗೆ ಹೆಚ್ಚು ಬಸ್ ವ್ಯವಸ್ಥೆ ಬೇಕು, ರಸ್ತೆಗಳನ್ನು ಅಭಿವೃದ್ಧಿ ಪಡಿಸಬೇಕು ಎಂಬ ನಿರ್ಣಯಗಳ ಅಡಿಯಲ್ಲಿ ಪಕ್ಷ ಸಂಘಟನೆ ಮತ್ತು ಹೋರಾಟ ನಡೆಯಲಿದೆ” ಎಂದು ತಿಳಿಸಿದರು.
ತಾಲ್ಲೂಕು ಸಮಿತಿ ಸದಸ್ಯ ಬಿಳ್ಳೂರು ನಾಗರಾಜ್, ದೇವಿಕುಂಟೆ ಶ್ರೀನಿವಾಸ್, ಡಿ.ಅಶ್ವತ್ಥ ನಾರಾಯಣ, ಜಿ.ಮುಸ್ತಾಫ ಮತ್ತಿತರರು ಉಪಸ್ಥಿತರಿದ್ದರು.
For Daily Updates WhatsApp ‘HI’ to 7406303366
The post ಬಾಗೇಪಲ್ಲಿ ಪರ್ಯಾಯ ರಾಜಕೀಯ ಶಕ್ತಿಯಾಗಿ CPM appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.