
Bagepalli : ಬಾಗೇಪಲ್ಲಿ ತಾಲ್ಲೂಕಿನ ಕೊಂಡರೆಡ್ಡಿಪಲ್ಲಿ ಹಾಗೂ ಹೊಸಹುಡ್ಯ ಗ್ರಾಮದ ರೈತರು ಭೂಮಿ ಸಂತ್ರಸ್ಥರ ಹೋರಾಟ ಸಮಿತಿ ನೇತೃತ್ವದಲ್ಲಿ ಒಪ್ಪಿಗೆ ಇಲ್ಲದೆಯೇ ಭೂ ಸ್ವಾಧೀನ ಮಾಡಿಕೊಂಡಿರುವ KIADB ಪಹಣಿಯಲ್ಲಿ ರೈತರ ಹೆಸರು ಕೈಬಿಟ್ಟು ತನ್ನ ಹೆಸರು ಬರುವಂತೆ ಮಾಡಿದೆ ಎಂದು ಆರೋಪಿಸಿ ಹಾಗೂ ವಿವಿಧ ಬೇಡಿಕೆ ಈಡೇರಿಕೆಗಾಗಿ ಆಗ್ರಹಿಸಿ ಗುರುವಾರ ಪುರಸಭೆ ಕಚೇರಿಯಿಂದ ಪಟ್ಟಣದ ಡಿವಿಜಿ ಮುಖ್ಯರಸ್ತೆಯಲ್ಲಿ ಮೆರವಣಿಗೆ ನಡೆಸಿ ತಾಲ್ಲೂಕು ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಒಂದು ಏಕರೆಗೆ ₹2 ಕೋಟಿ ಪರಿಹಾರ ನೀಡಬೇಕೆಂದು ಆಗ್ರಹಿಸಿದರು (Farmer Protest).
ಜಿಲ್ಲಾಧಿಕಾರಿ ಕೂಡಲೇ ಕ್ರಮಕೈಗೊಂಡು, ಪಹಣಿಯಲ್ಲಿನ ಕೆಐಎಡಿಬಿ ಹೆಸರನ್ನು ತೆಗೆದು ರೈತರ ಹೆಸರನ್ನು ನಮೋದಿಸುವಂತೆ ಒತ್ತಾಯಿಸಿದ್ದಾರೆ. ಅಲ್ಲದೆ, ಅದು ನಡೆಯದಿದ್ದರೆ ರೈತರು ತಮ್ಮ ಹೋರಾಟವನ್ನು ಇನ್ನಷ್ಟು ತೀವ್ರಗೊಳಿಸಬಹುದಾದ ಎಚ್ಚರಿಕೆ ನೀಡಿದರು. ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್ ಮನೀಷಾ ಎನ್ ಪತ್ರಿ, ರೈತರಿಂದ ಮನವಿ ಪತ್ರ ಸ್ವೀಕರಿಸಿದರು. ಪಹಣಿಯಲ್ಲಿ ರೈತರ ಹೆಸರು ಬರುವಂತೆ ಮಾಡಿಸಲು ಸರ್ಕಾರದ ಮಟ್ಟದಲ್ಲಿ ಜಿಲ್ಲಾಧಿಕಾರಿ ಮಾಡಿದ್ದಾರೆ ಎಂದು ಭರವಸೆ ನೀಡಿದರು.
ಭೂಮಿ ಸಂತ್ರಸ್ಥರ ಹೋರಾಟ ಸಮಿತಿಯ ಗೌರವಾಧ್ಯಕ್ಷ ಪಿ.ಒಬಳರಾಜು, ಕಾನೂನು ಸಲಹೆಗಾರ ಲಕ್ಷ್ಮಣರೆಡ್ಡಿ, ಪ್ರಾಂತ ರೈತ ಸಂಘದ ರಾಜ್ಯ ಸಮಿತಿ ಸದಸ್ಯ ಎಂ.ಎನ್.ರಘುರಾಮರೆಡ್ಡಿ, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಕಾರ್ಯದರ್ಶಿ ಬಿಳ್ಳೂರುನಾಗರಾಜ್, ಅಶ್ವಥ್ಥಪ್ಪ, ಜಿ.ಕೃಷ್ಣಪ್ಪ, ಸಿಐಟಿಯು ತಾಲ್ಲೂಕು ಕಾರ್ಯದರ್ಶಿ ಜಿ.ಮುಸ್ತಾಫ, ಶ್ರೀನಿವಾಸರೆಡ್ಡಿ, ರಮೇಶ್, ಎಚ್.ಎಲ್.ಮಂಜುನಾಥ್, ಮೂರ್ತಿ, ನಾರಾಯಣಪ್ಪ,, ಶೇಖರ, ಶಿವ, ಚಕ್ರವರ್ತಿ, ಎಚ್.ಎನ್.ಸತೀಶ, ನಾಗರಾಜು, ಎಚ್.ಎನ್.ನಂದೀಶ ಮತ್ತಿತರರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post KIADB ವಿರುದ್ಧ ರೈತರ ಪ್ರತಿಭಟನೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.