Bagepalli : ಬಾಗೇಪಲ್ಲಿ ತಾಲ್ಲೂಕಿನ ಐತಿಹಾಸಿಕ ದೇವರಗುಡಿಪಲ್ಲಿ (ಗಡಿದಂ) ಲಕ್ಷ್ಮಿ ವೆಂಕಟರಮಣಸ್ವಾಮಿ ರಥೋತ್ಸವ (Gadidam Venkataramana Swamy Rathotsava) ಗುರುವಾರ ಸಾವಿರಾರು ಭಕ್ತರ ಸಮ್ಮುಖದಲ್ಲಿ ಅದ್ಧೂರಿಯಾಗಿ ನಡೆಯಿತು.
ರಥೋತ್ಸವದ ಅಂಗವಾಗಿ ಲಕ್ಷ್ಮಿವೆಂಕಟರಮಣಸ್ವಾಮಿಗೆ ಅಭಿಷೇಕ, ಫಲಪಂಚಾಮೃತ ಅಭಿಷೇಕ, ವಿಶೇಷ ಹೂವಿನ ಅಲಂಕಾರ, ದೇವರ ಪಲ್ಲಕ್ಕಿ ಉತ್ಸವ, ಗರುಡೋತ್ಸವ ಸೇರಿದಂತೆ ವಿವಿಧ ಪೂಜಾ ಕೈಂಕಾರ್ಯ ನೆರವೇರಿತು. ಜಾತ್ರೆ ಅಂಗವಾಗಿ ದೇಗುಲ ಪಕ್ಕದಲ್ಲಿ ಪೆದ್ದತುಂಕೇಪಲ್ಲಿ ಗ್ರಾಮಕ್ಕೆ ಸಂಚರಿಸುವ ಮಾರ್ಗದ ರಸ್ತೆಯ ಇಕ್ಕೆಲಗಳಲ್ಲಿ ದನಗಳ ಜಾತ್ರೆ ನಡೆಯಿತು. ರೈತರು ಎತ್ತು ಮಾರಾಟ ಹಾಗೂ ಖರೀದಿ ಮಾಡಿದರು.
ಶಾಸಕ ಎಸ್.ಎನ್.ಸುಬ್ಬಾರೆಡ್ಡಿ, ತಹಶೀಲ್ದಾರ್ ಪ್ರಶಾಂತ್ ಕೆ ಪಾಟೀಲ್, ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಉಪ ವರಿಷ್ಠಾಧಿಕಾರಿ ಶಿವಕುಮಾರ್, ಸರ್ಕಲ್ ಇನ್ಸ್ ಪೆಕ್ಟರ್ ಪ್ರಶಾಂತ್ ವರ್ಣಿ ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.
For Daily Updates WhatsApp ‘HI’ to 7406303366
The post ಗಡಿದಂ ಲಕ್ಷ್ಮಿವೆಂಕಟರಮಣ ರಥೋತ್ಸವ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.