Bagepalli : ಬಾಗೇಪಲ್ಲಿ ವಿಧಾನಸಭೆ ಕ್ಷೇತ್ರದ ಮಾಜಿ ಶಾಸಕ (G V Sreerama Reddy) ಜಿ.ವಿ.ಶ್ರೀರಾಮರೆಡ್ಡಿ (73) ಶುಕ್ರವಾರ ಮುಂಜಾನೆ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ (Demise). ಮೂಲತಃ ಚಿಂತಾಮಣಿಯ ಬೈರಬಂಡ ಗ್ರಾಮದವರಾದ ಜಿ.ವಿ.ಶ್ರೀರಾಮರೆಡ್ಡಿ ಅವರು 1999 ಮತ್ತು 2004 ರಲ್ಲಿ ನಡೆದ ಚುನಾವಣೆಯಲ್ಲಿ ಬಾಗೇಪಲ್ಲಿ ಕ್ಷೇತ್ರದಿಂದ CPM ಪಕ್ಷದ ವತಿಯಿಂದ ಸ್ಪರ್ದಿಸಿ ವಿಧಾನಸಭೆಗೆ ಆಯ್ಕೆಗೊಂಡಿದ್ದರು.
ಎಡಪಂಥೀಯ ಪ್ರಭಾವಿ ನಾಯರಾಗಿದ್ದ ಜಿ.ವಿ.ಶ್ರೀರಾಮರೆಡ್ಡಿ ಅವರು ಸಿಪಿಐಎಂ ರಾಜ್ಯ ಕಾರ್ಯದರ್ಶಿಯಾಗಿ ಸಹ ಕಾರ್ಯನಿರ್ವಹಿಸಿದ್ದಾರೆ. ಶಾಸಕರಾಗಿದ್ದ ಅವಧಿಯಲ್ಲಿ ಉತ್ತಮ ಸಂಸದೀಯ ಪಟು ಎನ್ನಿಸಿಕೊಂಡಿದ್ದ ಜಿ.ವಿ.ಶ್ರೀರಾಮರೆಡ್ಡಿ ಅಧಿವೇಶನದಲ್ಲಿ ಕೇವಲ ತನ್ನ ಕ್ಷೇತ್ರವಲ್ಲದೆ ಇಡೀ ರಾಜ್ಯವನ್ನು ಪ್ರತಿನಿಧಿಸಿ ಮಾತನಾಡುತ್ತಿದ್ದರು. ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ, ಮಾಜಿ ಸಿಎಂ ಹಾಲಿ ವಿಪಕ್ಷ ನಾಯಕ ಸಿದ್ದರಾಮಯ್ಯರ ಅವರ ಜೊತೆ ಉತ್ತಮ ಭಾಂದವ್ಯವನ್ನು ಸಹ ಹೊಂದಿದ್ದರು.
ಇತ್ತೀಚಿಗೆ ಗುಡಿಬಂಡೆ ತಾಲೂಕಿನ ಚೆಂಡೂರು ಕ್ರಾಸ್ ಬಳಿಯ ಪ್ರಜಾವಿದ್ಯಾ ಸಂಸ್ಥೆಯ ಆವರಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾ ಸಮಾವೇಶದಲ್ಲಿ ಜಿ.ವಿ.ಶ್ರೀರಾಮರೆಡ್ಡಿ ಅವರು ಸಿಪಿಎಂ ಪಕ್ಷ ತೊರೆದು ಪ್ರಜಾ ಸಂಘರ್ಷ ಸಮಿತಿ ಪಕ್ಷ ವನ್ನು ಘೋಷಿಸಿದ್ದರು.
ಅವಿವಾಹಿತರಾಗಿದ್ದ ಜಿ.ವಿ.ಶ್ರೀರಾಮರೆಡ್ಡಿ ಅವರು ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದರು.