Search
WhatsApp alerts

Home › Bagepalli

ಬಾಗೇಪಲ್ಲಿ PLD Bank ಗೆ ಅವಿರೋಧ ಆಯ್ಕೆ

administrator · Published

Bagepalli : ಬಾಗೇಪಲ್ಲಿ ತಾಲ್ಲೂಕು ಪ್ರಾಥಮಿಕ ಸಹಕಾರಿ ಕೃಷಿ ಮತ್ತು ಗ್ರಾಮಾಭಿವೃದ್ಧಿ ಬ್ಯಾಂಕ್‌ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಶುಕ್ರವಾರ ನಡೆದ ಚುನಾವಣೆಯಲ್ಲಿ ಶ್ರೀನಿವಾಸರೆಡ್ಡಿ ಮತ್ತು ಬಿ.ಎ. ನರಸಿಂಹಮೂರ್ತಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಪ್ರೇಮ್‌ಕುಮಾರ್ ತಿಳಿಸಿದ್ದಾರೆ.

ಬ್ಯಾಂಕ್‌ನ 14 ನಿರ್ದೇಶಕ ಸ್ಥಾನಗಳಿಗೆ ಎರಡು ತಿಂಗಳ ಹಿಂದೆ ಚುನಾವಣೆ ನಡೆದು 11 ನಿರ್ದೇಶಕರು ಅವಿರೋಧ ಆಯ್ಕೆಯಾಗಿದ್ದರು. ಉಳಿದಂತೆ ಚಾಕವೇಲು, ಬಿಳ್ಳೂರು, ನಾರೇಮದ್ದೇಪಲ್ಲಿ ಕ್ಷೇತ್ರಗಳಿಗೆ ಫೆಬ್ರವರಿ 16 ರಂದು ಚುನಾವಣೆ ನಡೆಯಿತು.

ಈ ಸಂದರ್ಭದಲ್ಲಿ ಪುರಸಭೆ ಅಧ್ಯಕ್ಷ ಎ. ಶ್ರೀನಿವಾಸ್, ಸದಸ್ಯ ನಂಜುಂಡಪ್ಪ, ಗಡ್ಡಂ ರಾಮೇಶ್, ಮಾಜಿ ಅಧ್ಯಕ್ಷ ಬಿ.ಆರ್. ನರಸಿಂಹನಾಯ್ಡು, ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ನಿಜಾಮುದ್ದೀನ್ (ಬಾಬು), ಮನ್ಸೂರ್, ಸೂರ್ಯನಾರಾಯಣರೆಡ್ಡಿ ಮತ್ತಿತರರು ಉಪಸ್ಥಿತರಿದ್ದರು.

For Daily Updates WhatsApp ‘HI’ to 7406303366

The post ಬಾಗೇಪಲ್ಲಿ PLD Bank ಗೆ ಅವಿರೋಧ ಆಯ್ಕೆ appeared first on Chikkaballapur | Chikballapur | Chikkaballapura Latest Breaking New Stories | ಚಿಕ್ಕಬಳ್ಳಾಪುರ ಸುದ್ದಿ.

Read next

ಪೌರಕಾರ್ಮಿಕರೊಂದಿಗೆ ನೇರ ಸಂವಾದ ಕಾರ್ಯಕ್ರಮ ಮುಂದೂಡಿಕೆ

ಅಧಿಕ ಭಾರ, ಅತಿವೇಗ ಮತ್ತು ಅಕ್ರಮ ಗಣಿಗಾರಿಕೆಗೆ ಬ್ರೇಕ್: ಎರಡು ವಿಶೇಷ ತಂಡ ರಚನೆ

ಜೀತ ಪದ್ಧತಿ ಸಂತ್ರಸ್ತೆಗೆ ₹7 ಲಕ್ಷ ಪರಿಹಾರ: ಜೀತ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ ಎಂದ ನ್ಯಾಯಾಧೀಶರು

ಪೌರಕಾರ್ಮಿಕರೊಂದಿಗೆ ನೇರ ಸಂವಾದ: ನವೆಂಬರ್ 18ರಂದು ಸಫಾಯಿ ಕರ್ಮಚಾರಿ ಆಯೋಗದ ಭೇಟಿ

You cannot copy content of this page