back to top
25.2 C
Bengaluru
Wednesday, October 8, 2025
HomeKarnatakaಬ್ಯಾಲೆಟ್ Vs ಇವಿಎಂ: Congress-BJP ವಾದ ವಿವಾದ

ಬ್ಯಾಲೆಟ್ Vs ಇವಿಎಂ: Congress-BJP ವಾದ ವಿವಾದ

- Advertisement -
- Advertisement -

Bengaluru: ರಾಹುಲ್ ಗಾಂಧಿ ಇವಿಎಂ (EVM) ಯಂತ್ರಗಳ ಬಗ್ಗೆ ಅನುಮಾನ ವ್ಯಕ್ತಪಡಿಸಿ ಅಭಿಯಾನ ನಡೆಸಿದ್ದಾರೆ. ಇದಕ್ಕೆ ಬೆಂಬಲವಾಗಿ ಸಿದ್ದರಾಮಯ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಬ್ಯಾಲೆಟ್ ಪೇಪರ್ ಬಳಕೆ ಮಾಡುವ ನಿರ್ಧಾರ ಕೈಗೊಂಡಿದೆ.

ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡಿದ್ದು, ಮತದಾರರ ಪಟ್ಟಿಯನ್ನು ತಿದ್ದುಪಡಿ ಮಾಡುವ ಅಧಿಕಾರವನ್ನೂ ರಾಜ್ಯ ಚುನಾವಣಾ ಆಯೋಗಕ್ಕೆ ನೀಡಲಾಗಿದೆ.

  • ಈ ನಿರ್ಧಾರಕ್ಕೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ.
  • ಬಿವೈ ವಿಜಯೇಂದ್ರ: “ಇವಿಎಂ ಮೇಲೆ ನಂಬಿಕೆ ಇಲ್ಲ ಅಂದರೆ ಕಾಂಗ್ರೆಸ್ ಶಾಸಕರು ರಾಜೀನಾಮೆ ನೀಡಿ ಮತ್ತೆ ಚುನಾವಣೆ ಎದುರಿಸಲಿ” ಎಂದು ಸವಾಲು ಹಾಕಿದ್ದಾರೆ.
  • ಡಿಕೆ ಶಿವಕುಮಾರ್: ಸರ್ಕಾರದ ನಿರ್ಧಾರವನ್ನು ಸಮರ್ಥಿಸಿಕೊಂಡು ಬಿಜೆಪಿಗೆ ತಿರುಗೇಟು ನೀಡಿದ್ದಾರೆ.
  • ಬೊಮ್ಮಾಯಿ ಮತ್ತು ಶೆಟ್ಟರ್ ಪ್ರತಿಕ್ರಿಯೆ,
  • ಬಸವರಾಜ ಬೊಮ್ಮಾಯಿ: “ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ, ಬ್ಯಾಲೆಟ್ ಮೂಲಕ ಗೆದ್ದು ಬರಲಿ” ಎಂದು ಟ್ವೀಟ್ ಮೂಲಕ ಸವಾಲು ಹಾಕಿದ್ದಾರೆ.
  • ಜಗದೀಶ್ ಶೆಟ್ಟರ್: “ಮತ್ತೆ ಮತಪತ್ರ ಬಳಕೆಯತ್ತ ಮುಖ ಮಾಡುವುದು ಮೂರ್ಖತನ” ಎಂದು ಕಿಡಿಕಾರಿದ್ದಾರೆ.
  • ಸಿಎಂ ಸಿದ್ದರಾಮಯ್ಯ: “ಅನೇಕ ದೇಶಗಳು ಮತ್ತೆ ಬ್ಯಾಲೆಟ್ ಪೇಪರ್ ಬಳಕೆ ಮಾಡುತ್ತಿವೆ” ಎಂದು ತಮ್ಮ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.
  • ರಾಜ್ಯ ಚುನಾವಣಾ ಆಯುಕ್ತರು: “ಕಾನೂನು ಪ್ರಕಾರ ನಿಯಮಾವಳಿ ಮಾಡಿದರೆ ಬ್ಯಾಲೆಟ್ ಪೇಪರ್ ಬಳಕೆಗೆ ಸಿದ್ಧ” ಎಂದಿದ್ದಾರೆ.

ಕಾಂಗ್ರೆಸ್ ಹಾಗೂ ಬಿಜೆಪಿ ನಡುವೆ ಬ್ಯಾಲೆಟ್-ಇವಿಎಂ ಬಡಿದಾಟ ತೀವ್ರಗೊಂಡಿದೆ. ಚುನಾವಣಾ ಆಯೋಗ ಕೊನೆಗೆ ಬ್ಯಾಲೆಟ್ ಪೇಪರ್‌ಗೆ ಒಪ್ಪಿಗೆ ನೀಡುತ್ತದೆಯೇ ಎಂದು ಕಾದುನೋಡಬೇಕಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page