Bengaluru (Bangalore) : ಬಕ್ರೀದ್ (Bakrid – Eid al-Adha Festival) ಹಬ್ಬದ ಆಚರಣೆ ಹಿನ್ನೆಲೆಯಲ್ಲಿ ಬುಧವಾರ ಸುದ್ಧಿಗೋಷ್ಠಿ ನಡೆಸಿ BBMP ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ (Tushar Giri Nath) ಮಾರ್ಗಸೂಚಿಗಳನ್ನು ತಿಳಿಸಿದರು.
ಹಬ್ಬದ ಪ್ರಾರ್ಥನೆಗೆ ರಸ್ತೆ ಬಂದ್ ಮಾಡುವುದು ಮತ್ತು ಟ್ರಾಫಿಕ್ ಸಿಗ್ನಲ್ (Traffic Signal) ನಲ್ಲಿ ಚಾಪೆ ಹಾಸುವುದಕ್ಕೆ ಅವಕಾಶ ಇರುವುದಿಲ್ಲ ಎಂದು ಆಯುಕ್ತರು ಹೇಳಿದರು.
ಚಾಮರಾಜಪೇಟೆಯ ಈದ್ಗಾ ಮೈದಾನ (Eidgah Masjid Chamarajpet) ದಲ್ಲಿ ನಮಾಜ್ ಮಾಡಲು ಸುಪ್ರೀಂ ಕೋರ್ಚ್ (Supreme Court) ಅವಕಾಶ ನೀಡಿದ್ದು ಪ್ರತಿ ವರ್ಷದಂತೆ ಈ ಬಾರಿಯೂ ಮುಸ್ಲಿಮ್ ಸಮುದಾಯದವರು ಪ್ರಾರ್ಥನೆ (Namaz) ಸಲ್ಲಿಸಲಿದ್ದಾರೆ. ಅವರಿಗೆ ಅನುಮತಿ ಕೊಡಬೇಕೋ, ಬೇಡವೋ ಎಂಬ ಪ್ರಶ್ನೆ ಬಿಬಿಎಂಪಿಯ ಮುಂದಿಲ್ಲ ಎಂದು ತಿಳಿಸಿದರು.