Chikkaballapur : ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಯೋಗದಲ್ಲಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಶುಕ್ರವಾರ ಜಗಜ್ಯೋತಿ ಬಸವಣ್ಣ (Basava Jayanthi) ಹಾಗೂ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ನೇತೃತ್ವದಲ್ಲಿ ಆಚರಿಸಲಾಯಿತು.
ಅಖಿಲ ಭಾರತ ವೀರಶೈವ ಮಹಾಸಭಾ, ವೀರಶೈವ ಸೇವಾ ಸಮಾಜ ಮತ್ತು ವೀರಶೈವ ಮಹಿಳಾ ಸಮಾಜದ ಸಹಯೋಗದಲ್ಲಿ ಚಿಕ್ಕಬಳ್ಳಾಪುರ ನಗರದ ಬಸವನಗುಡಿಯಲ್ಲಿ ಶುಕ್ರವಾರ ಜಗಜ್ಯೋತಿ ಬಸವೇಶ್ವರ ಜಯಂತಿ ನಡೆಯಿತು.
ಗೌರಿಬಿದನೂರು :
ಗೌರಿಬಿದನೂರು ನಗರದ ಸಮಾನತಾ ಸ್ತೂಪದ ಬಳಿ ವೀರಶೈವ ಲಿಂಗಾಯಿತ ಮುಖಂಡರು ಬಸವಣ್ಣರ ಸ್ತೂಪಕ್ಕೆ ಮಾಲಾರ್ಪಣೆ ಮಾಡಿ ಬಸವ ಜಯಂತಿ ಕಾರ್ಯಕ್ರಮ ಆಚರಿಸಿದರು.
ಚಿಂತಾಮಣಿ :
ಚಿಂತಾಮಣಿ ನಗರದ ಕೆ ಎಂ ಡಿ ಕಲ್ಯಾಣ ಮಂಟಪದಲ್ಲಿ ಕರ್ನಾಟಕದ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಜಯಂತಿಯನ್ನು ಆಚರಿಸಲಾಯಿತು.
ಶಿಡ್ಲಘಟ್ಟ :
ಶಿಡ್ಲಘಟ್ಟ ನಗರದ ಅರಳೇಪೇಟೆಯ ಬಸವೇಶ್ವರ ದೇವಾಲಯದಲ್ಲಿ ಬಸವೇಶ್ವರ ಜಯಂತ್ಯುತ್ಸವದ ಪ್ರಯುಕ್ತ ರುದ್ರಾಭಿಷೇಕ ಹಾಗೂ ವಿಶೇಷ ಪೂಜೆ ಆಯೋಜಿಸಲಾಗಿತ್ತು.
For Daily Updates WhatsApp ‘HI’ to 7406303366
The post ಜಿಲ್ಲೆಯಾದ್ಯಂತ ಸರಳ ಬಸವ ಜಯಂತಿ ಆಚರಣೆ appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ.