Hubballi: ವಿಧಾನಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿ (Legislative Council Speaker Basavaraj Horatti) ಅವರು, ಸದನದಲ್ಲಿ ನಡೆದ ಗದ್ದಲದ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ, ರಾಜೀನಾಮೆ ನೀಡುವ ಬಗ್ಗೆ ಮಾತನಾಡಿದ್ದರು. ಆದರೆ, ಈಗ ಅವರು ತಮ್ಮ ರಾಜೀನಾಮೆ ನಿರ್ಧಾರದಿಂದ ಹಿಂದೆ ಸರಿದಿದ್ದಾರೆ.
ರಾಜೀನಾಮೆ ಸುದ್ದಿಯ ನಂತರ, ರಾಜ್ಯಪಾಲರು, ಮಂತ್ರಿಗಳು ಮತ್ತು ಸಾಹಿತಿಗಳು ಅವರೊಂದಿಗೆ ಮಾತುಕತೆ ನಡೆಸಿದರು. ಇದೇ ಕಾರಣಕ್ಕೆ ಅವರು ಮಾರ್ಚ್ 27ರಂದು ಸಭೆ ನಡೆಸಿ ಅಂತಿಮ ತೀರ್ಮಾನ ಕೈಗೊಳ್ಳಲು ನಿರ್ಧರಿಸಿದ್ದಾರೆ.
ಮಾರ್ಚ್ 19, 20, 21ರಂದು ಸದನದಲ್ಲಿ ಗದ್ದಲದ ಕಾರಣವಾಗಿ ಚರ್ಚೆ ನಡೆಯದೆ, ಬಿಲ್ ಪಾಸಾಗಿದೆ. ಇದರಿಂದ ಮನಸ್ಸಿಗೆ ಬೇಜಾರಾಗಿದೆಯೆಂದು ಹೊರಟ್ಟಿ ಬೇಸರ ವ್ಯಕ್ತಪಡಿಸಿದರು.
ಹಲವರು ರಾಜೀನಾಮೆಯಿಂದ ಸಮಸ್ಯೆ ಪರಿಹಾರವಾಗುವುದಿಲ್ಲ ಎಂದು ಸಲಹೆ ನೀಡಿದ್ದಾರೆ. 27ರ ನಂತರ ಎಲ್ಲಾ 75 ಸದಸ್ಯರಿಗೆ ಪತ್ರ ಕಳುಹಿಸುವುದಾಗಿ ಅವರು ತಿಳಿಸಿದ್ದಾರೆ.
“ಜನರ ಅಭಿವೃದ್ಧಿ ಬಗ್ಗೆ ಸದನದಲ್ಲಿ ಚರ್ಚೆಯಾಗಬೇಕು. ಮುಂದಿನ ಅಧಿವೇಶನದಲ್ಲಿ ಉತ್ತಮ ಬದಲಾವಣೆ ತರುವ ಕನಸು ನನಸು ಮಾಡುತ್ತೇನೆ” ಎಂದು ಬಸವರಾಜ್ ಹೊರಟ್ಟಿ ಅಭಿಪ್ರಾಯಪಟ್ಟಿದ್ದಾರೆ.