back to top
25.2 C
Bengaluru
Friday, July 18, 2025
HomeNewsBCCI Reward: Team India ಗೆ 58 ಕೋಟಿ ರೂ. ನಗದು ಪ್ರಶಸ್ತಿ

BCCI Reward: Team India ಗೆ 58 ಕೋಟಿ ರೂ. ನಗದು ಪ್ರಶಸ್ತಿ

- Advertisement -
- Advertisement -

ಚಾಂಪಿಯನ್ಸ್ ಟ್ರೋಫಿ 2025 ಗೆದ್ದ ಟೀಮ್ ಇಂಡಿಯಾಗೆ (Team India) BCCI 58 ಕೋಟಿ ರೂ. ನಗದು ಬಹುಮಾನ ಘೋಷಿಸಿದೆ. ದುಬೈನಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ನ್ಯೂಝಿಲೆಂಡ್ ತಂಡವನ್ನು ಸೋಲಿಸಿ, ರೋಹಿತ್ ಶರ್ಮಾ ನೇತೃತ್ವದ ಭಾರತ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು.

ಈ ಮಹತ್ವದ ಗೆಲುವಿಗೆ ಗೌರವ ಸೂಚಿಸಿ, ಬಿಸಿಸಿಐ 58 ಕೋಟಿ ರೂ. ಬಹುಮಾನ ಘೋಷಿಸಿದ್ದು, ಈ ಮೊತ್ತವನ್ನು ಆಟಗಾರರು, ತರಬೇತಿ ಸಿಬ್ಬಂದಿ ಮತ್ತು ಸಹಾಯಕ ಸಿಬ್ಬಂದಿಗಳು ಹಂಚಿಕೊಳ್ಳಲಿದ್ದಾರೆ.

2024 ರ ಟಿ20 ವಿಶ್ವಕಪ್ ಗೆದ್ದಾಗ, ಬಿಸಿಸಿಐ 125 ಕೋಟಿ ರೂ. ಬಹುಮಾನ ನೀಡಿತ್ತು. ಅದರಲ್ಲಿ ಆಟಗಾರರಿಗೆ ಹಾಗೂ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ತಲಾ 5 ಕೋಟಿ ರೂ., ಇತರ ಸಿಬ್ಬಂದಿಗಳಿಗೆ ತಲಾ 2.5 ಕೋಟಿ ರೂ. ಹಂಚಲಾಗಿತ್ತು. ಇದೇ ಮಾದರಿಯಲ್ಲಿ ಈ ಬಾರಿ 58 ಕೋಟಿ ರೂ. ಸದಸ್ಯರಿಗೆ ಹಂಚಲಾಗುವುದು.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page