Home West Bengal Kolkata BCCI ಅಧ್ಯಕ್ಷ ಸೌರವ್ ಗಂಗೂಲಿ Covid-19 ನಿಂದ ಆಸ್ಪತ್ರೆಗೆ ದಾಖಲು

BCCI ಅಧ್ಯಕ್ಷ ಸೌರವ್ ಗಂಗೂಲಿ Covid-19 ನಿಂದ ಆಸ್ಪತ್ರೆಗೆ ದಾಖಲು

Former Indian Cricket Team Captain BCCI President Sourav Ganguly Admitted to Hospital Following Covid-19 Positive

Kolkata : ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ BCCI ಅಧ್ಯಕ್ಷ ಮತ್ತು ಭಾರತ ಕ್ರಿಕೆಟ್ ತಂಡದ (Indian Cricket Team) ಮಾಜಿ ನಾಯಕ ಸೌರವ್ ಗಂಗೂಲಿ (Sourav Ganguly) ಅವರು Covid-19 ನಿಂದ ಕೋಲ್ಕತ್ತಾದ ವುಡ್‌ಲ್ಯಾಂಡ್ಸ್ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎರಡು ಬಾರಿ ಲಸಿಕೆ ಪಡೆದಿರುವ ಗಂಗೂಲಿ Covid-19 ಪರೀಕ್ಷೆಯಲ್ಲಿ ಪಾಸಿಟಿವ್ ಬಂದ ನಂತರ ಸೋಮವಾರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಅವರ ಸ್ಥಿತಿ ಸ್ಥಿರವಾಗಿದೆ ಎಂದು ಆಸ್ಪತ್ರೆಯ ಹೇಳಿಕೆ ತಿಳಿಸಿದೆ. ಓಮಿಕ್ರಾನ್ (Omicron) ಪರಿಕ್ಷೆಗಾಗಿ ಗಂಗೂಲಿ ಅವರ ಮಾದರಿಯನ್ನು ಕಳುಹಿಸಲಾಗಿದೆ ಎಂದು ಆಸ್ಪತ್ರೆಯ ವೈದ್ಯರು ತಿಳಿಸಿದ್ದಾರೆ.

“ಬಿಸಿಸಿಐ ಅಧ್ಯಕ್ಷ ಮತ್ತು ಮಾಜಿ ಭಾರತೀಯ ಕ್ರಿಕೆಟ್ ನಾಯಕ ಶ್ರೀ ಸೌರವ್ ಗಂಗೂಲಿ ಅವರು ಡಿಸೆಂಬರ್ 27, 2021 ರಂದು ಸಂಜೆ ಕೋವಿಡ್ ಪಾಸಿಟಿವ್ ಸ್ಥಿತಿಯೊಂದಿಗೆ ವುಡ್‌ಲ್ಯಾಂಡ್ಸ್ ಮಲ್ಟಿಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ” ಎಂದು ಆಸ್ಪತ್ರೆ ಅಧಿಕೃತ ಹೇಳಿಕೆಯಲ್ಲಿ ತಿಳಿಸಿದೆ.

ಈ ವರ್ಷದ ಆರಂಭದಲ್ಲಿ ಗಂಗೂಲಿ ಅವರನ್ನು ಎರಡು ಬಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಹೃದಯ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಆಂಜಿಯೋಪ್ಲ್ಯಾಸ್ಟಿಗೆ (Angioplasty) ಒಳಗಾಗಿದ್ದರು.

NO COMMENTS

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.

You cannot copy content of this page

Exit mobile version