Belagavi : ಬೆಳಗಾವಿ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕುಡಿಯುವ ನೀರು (Drinking Water Supply) ಸರಬರಾಜಿನಲ್ಲಿ ವ್ಯತ್ಯಯ ಉಂಟಾಗದಂತೆ ಕಾರ್ಯನಿರ್ವಹಿಸಲು ಪಾಲಿಕೆಯ ಆಡಳಿತಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ (Deputy Commissioner) ಎಂ.ಜಿ. ಹಿರೇಮಠ ಅವರ ನಿರ್ದೇಶನದಂತೆ ನೂರಕ್ಕೂ ಅಧಿಕ ಸಿಬ್ಬಂದಿಯನ್ನು ನೇಮಕ ಮಾಡಿಕೊಳ್ಳಲು ಮಹಾನಗರ ಪಾಲಿಕೆ ನಿರ್ಧರಿಸಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ್ ಘಾಳಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ನೀರು ಸರಬರಾಜು ನೌಕರರು January 10 ರಿಂದ ಮುಷ್ಕರ ನಡೆಸುವುದಾಗಿ ತಿಳಿಸಿದ್ದರಿಂದ ಅಧಿಕಾರಿಗಳು ಪರ್ಯಾಯ ವ್ಯವಸ್ಥೆಗೆ ಮೊರೆ ಹೋಗಿದ್ದಾರೆ.