Belgaum : ಬೆಳಗಾವಿಯಲ್ಲಿ (Belagavi) 2ಎ ಮೀಸಲಾತಿಗೆ ಆಗ್ರಹಿಸಿ ನಡೆದ ಲಿಂಗಾಯತ ಪಂಚಮಸಾಲಿ (Panchamasali Reservation Protest) ಸಮುದಾಯದ ಪ್ರತಿಭಟನೆ ತೀವ್ರ ಸ್ವರೂಪ ಪಡೆದಿದೆ. ಪ್ರತಿಭಟನೆಯ ವೇಳೆ ಕಲ್ಲು ತೂರಾಟದಲ್ಲಿ ಪೊಲೀಸ್ ಇನ್ಸ್ಪೆಕ್ಟರ್ ಸೇರಿದಂತೆ 17 ಜನರಿಗೆ ಗಾಯಗಳಾಗಿದ್ದು, ಸರ್ಕಾರಿ ಮತ್ತು ಪೊಲೀಸ್ ವಾಹನಗಳು ಜಖಂಗೊಂಡಿವೆ.
ಕಲ್ಲು ಎಸೆದ ಆರೋಪದ ಮೇಲೆ ನಿಂಗಪ್ಪ ಬಣದ್, ರಾಮಗೌಡ ಫಕೀರಗೌಡ, ಉಮೇಶ್ ಇಂಗಳೆವಾರ್, ಮಂಜುನಾಥ್ ಬೆಂಡಿಗೇರಿ, ಮಂಜುನಾಥ್ ಗುಮ್ಮಗೋಳ ಸೇರಿದಂತೆ ಹಲವರ ವಿರುದ್ಧ FIR ದಾಖಲಿಸಲಾಗಿದೆ.
ಆರೋಪಿತರ ಮೇಲೆ ಕರ್ತವ್ಯಕ್ಕೆ ಅಡ್ಡಿಪಡಿಸುವುದು, ಹಲ್ಲೆ, ಗಂಭೀರ ಗಾಯ ಮಾಡುವುದು, ಕೊಲೆ ಯತ್ನ ಮತ್ತು ಸಾರ್ವಜನಿಕ ಆಸ್ತಿ-ಪಾಸ್ತಿಗೆ ಹಾನಿ ಮಾಡಿರುವ ಆರೋಪ ಹೇರಲಾಗಿದೆ. ಕೇಸನ್ನು ಹಿರೇಬಾಗೇವಾಡಿ ಠಾಣೆಯ ಪಿಐ ಆರ್.ಆರ್ ಪಾಟೀಲ್ ಅವರು ದಾಖಲಿಸಿದ್ದಾರೆ.
ಹೋರಾಟದ ವೇಳೆ ಏಳು ಸರ್ಕಾರಿ ಬಸ್‌ಗಳು ಮತ್ತು ಮೂರು ಪೊಲೀಸ್ ವಾಹನಗಳು ಹಾನಿಗೊಳಗಾದ ಹಿನ್ನೆಲೆಯಲ್ಲಿ ಹಿರೇಬಾಗೇವಾಡಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದ್ದಾರೆ.