Belagavi: ಚಳಿಗಾಲದ ಅಧಿವೇಶನ (winter session) ಆರಂಭದ ಸಮಯದಲ್ಲಿ ಮಹಾರಾಷ್ಟ್ರದ ಮಾಜಿ ಮುಖ್ಯಮಂತ್ರಿ ಉದ್ದವ್ ಠಾಕ್ರೆ ಅವರ ಪುತ್ರ ಮತ್ತು ಶಿವಸೇನೆ ಶಾಸಕ ಆದಿತ್ಯ ಠಾಕ್ರೆ (Aaditya Thackeray) ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ.
ಆದಿತ್ಯ ಠಾಕ್ರೆ ಬೆಳಗಾವಿ ಗಡಿ ವಿವಾದವನ್ನು ಪ್ರಸ್ತಾಪಿಸಿ, ಗಡಿ ಸಮಸ್ಯೆ ಇತ್ಯರ್ಥವಾಗುವವರೆಗೆ ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿ ಘೋಷಿಸಬೇಕು ಎಂದು ಒತ್ತಾಯಿಸಿದ್ದಾರೆ. ಕೇಂದ್ರ ಸರ್ಕಾರ ಈ ವಿಷಯದಲ್ಲಿ ಮಧ್ಯಪ್ರವೇಶಿಸಬೇಕು ಎಂಬುದಾಗಿ ಅವರು ಹೇಳಿದ್ದಾರೆ.
ಇದು ಉದ್ಧವ್ ಠಾಕ್ರೆ ಬಣದಿಂದ ಗಡಿ ವಿವಾದಕ್ಕೆ ಸಂಬಂಧಿಸಿದ ಹೊಸ ಮಾತಾಗಿಲ್ಲ. ಈ ಹಿಂದೆ ಭಾಷಾ ವಿಷಯದಲ್ಲಿ ವಿವಾದ ಎಬ್ಬಿಸಿದ್ದ ಉದ್ಧವ್ ಠಾಕ್ರೆ, ಈಗ ಕೇಂದ್ರಾಡಳಿತ ಪ್ರದೇಶದ ಪ್ರಸ್ತಾಪದ ಮೂಲಕ ಮತ್ತೊಂದು ದೊಡ್ಡ ವಿವಾದ ಸೃಷ್ಟಿಸಿದ್ದಾರೆ.