Bengaluru (Bangalore) : ದಿನೇ ದಿನೇ ಕೋವಿಡ್ (Covid 19) ಪ್ರಕರಣಗಳು ಹೆಚ್ಚಾಗುತ್ತಿದ್ದು, ತಡೆಯಲು ಅರೋಗ್ಯ ಇಲಾಖೆ ಹೊಸ ಮಾರ್ಗಸೂಚಿಗಳನ್ನು (New Guidelines) ಹೊರಡಿಸಿದೆ. BBMP, ಬೆಂಗಳೂರು ನಗರ ಮತ್ತು ಜಿಲ್ಲೆಯ ವ್ಯಾಪ್ತಿಯ ವಿದ್ಯಾ ಸಂಸ್ಥೆಗಳು, ಕಾಲೇಜು ಹಾಗೂ ಅಪಾರ್ಟ್ಮೆಂಟ್ (Apartmnent) ಗಳಲ್ಲಿ ಈ ಮಾರ್ಗಸೂಚಿ ಕಡ್ಡಾಯವಾಗಿ ಪಾಲನೆ ಮಾಡಬೇಕು ಎಂದು ಇಲಾಖೆ ಸೂಚಿಸಿದೆ.
ಅರೋಗ್ಯ ಇಲಾಖೆ ಬಿಡುಗಡೆ ಮಾಡಿದ ಹೊಸ ಮಾರ್ಗಸೂಚಿ:
- ಕಚೇರಿ ಹಾಗೂ ಶಾಲೆಗಳಲ್ಲಿ ಕೋವಿಡ್ ಲಕ್ಷಣವಿರುವ ವ್ಯಕ್ತಿಗೆ ರಜೆ ನೀಡಿ ಉಳಿದ ವಿದ್ಯಾರ್ಥಿಗಳು ಹಾಗೂ ಉದ್ಯೋಗಿಗಳು Rapid Antigen ಪರೀಕ್ಷೆಗೆ ಒಳಪಟ್ಟು ಸೋಂಕಿತರಾಗಿಲ್ಲ ಎಂಬ ವರದಿ ಬಂದಲ್ಲಿ RT-PCR ಪರೀಕ್ಷೆ ಮಾಡಿಸಿಕೊಳ್ಳಬೇಕು.
- ಕ್ಲಸ್ಟರ್‌ಗಳಲ್ಲಿ ರೋಗ ಲಕ್ಷಣಗಳು ಇರುವವರಿಗೆ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆ ಮಾಡಿಸಬೇಕು. ಕ್ಲಸ್ಟರ್ (Cluster) ಪ್ರಕರಣಗಳು ವರದಿಯಾದ ಶಿಕ್ಷಣ ಸಂಸ್ಥೆಗಳಲ್ಲಿ ಕೊಠಡಿಗಳನ್ನು ಸ್ಯಾನಿಟೈಝೆರ್ ನಿಂದ ಸ್ವಚ್ಛಗೊಳಿಸಬೇಕು.
- ಅಪಾರ್ಟ್‌ಮೆಂಟ್ ಗಳಲ್ಲಿ 3–5 ಕೋವಿಡ್ ಪ್ರಕರಣಗಳು ವರದಿಯಾದಲ್ಲಿ ಸಣ್ಣ ಕ್ಲಸ್ಟರ್ ಎಂದು ಪರಿಗಣಿಸಿ ನಿಗದಿತ Block ನಲ್ಲಿ ಲಕ್ಷಣ ಹೊಂದಿರುವವರನ್ನು ಪರೀಕ್ಷೆಗೆ ಒಳಪಡಿಸಬೇಕು.
- 5ಕ್ಕಿಂತ ಹೆಚ್ಚು ಪ್ರಕರಣಗಳು ದೃಢಪಟ್ಟರೆ ದೊಡ್ಡ ಕ್ಲಸ್ಟರ್ ಎಂದು ಪರಿಗಣಿಸಿ ಮತ್ತು 15 ಅಥವಾ ಅದಕ್ಕಿಂತ ಹೆಚ್ಚಿನ ಪ್ರಕರಣಗಳು ವರದಿಯಾದಲ್ಲಿ ಅಪಾರ್ಟ್‌ಮೆಂಟ್ ನಲ್ಲಿ ಲಕ್ಷಣ ಹೊಂದಿರುವ ಎಲ್ಲರನ್ನೂ ರ್‍ಯಾಪಿಡ್ ಆ್ಯಂಟಿಜೆನ್ ಪರೀಕ್ಷೆಗೆ ಒಳಪಡಿಸಬೇಕು.
- ಸೋಂಕಿತರಾದಲ್ಲಿ ಆರೋಗ್ಯ ಸ್ಥಿತಿಗೆ ಅನುಗುಣವಾಗಿ ಆಸ್ಪತ್ರೆ, ಆರೈಕೆ ಕೇಂದ್ರ ಅಥವಾ ಮನೆ ಚಿಕಿತ್ಸೆ (Home Isolation) ನಿರ್ಧರಿಸಬೇಕು.