Bengaluru: ಸಿಲಿಕಾನ್ ಸಿಟಿ (Silicon City) ಜನರಿಗೆ ಮತ್ತೊಂದು ದರ ಏರಿಕೆ ಶಾಕ್ ಎದುರಾಗಿದೆ. ಹೌದು, ಮೆಟ್ರೋ (Metro) ಪ್ರಯಾಣಿಕರಿಗೆ ಶಾಕ್ ನೀಡಲು BMRCL ಮುಂದಾಗಿದ್ದು, ಮೆಟ್ರೋ ಟಿಕೆಟ್ ದರ ಏರಿಕೆ (increasing the metro ticket price) ಮಾಡಲು ಚಿಂತನೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.
ಸಮಿತಿಯಲ್ಲಿ ಮದ್ರಾಸ್ ಹೈಕೋರ್ಟ್ (Madras High Court) ನಿವೃತ್ತ ನ್ಯಾಯಮೂರ್ತಿ ಆರ್ ಥರಾಣಿ (R Tharani) ಅವರು ಅಧ್ಯಕ್ಷರಾಗಿದ್ದರೆ. ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಸತ್ಯೇಂದ್ರ ಪಾಲ್ ಸಿಂಗ್ ಮತ್ತು ಕರ್ನಾಟಕದ ಮಾಜಿ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಇ ವಿ ರಮಣ ರೆಡ್ಡಿ ಸದಸ್ಯರಾಗಿ ನೇಮಿಸಲಾಗಿದೆ.
ಕಳೆದ ಮೂರು ವರ್ಷಗಳಿಂದ ಪ್ರಯಾಣ ದರದಲ್ಲಿ ಪರಿಷ್ಕರಣೆಗಾಗಿ ಸರ್ಕಾರಕ್ಕೆ ಮನವಿ ಸಲ್ಲಿಸುತ್ತಲೇ ಇದ್ದೇವೆ. ಇದೀಗ ಅಂತಿಮವಾಗಿ ಸಮಿತಿಯನ್ನು ರಚಿಸಲಾಗಿದೆ.
ಸಮಿತಿಯು ಕಾರ್ಯಾಚರಣೆಯ ವೆಚ್ಚ, ಅಂತರರಾಷ್ಟ್ರೀಯ ಏಜೆನ್ಸಿಗಳಿಗೆ ವಾರ್ಷಿಕವಾಗಿ ಪಾವತಿಸುವ ಬಡ್ಡಿ, ಮರುಪಾವತಿಸುತ್ತಿರುವ ಸಾಲದ ಮೊತ್ತ ಮತ್ತು ಇತರ ವೆಚ್ಚಗಳನ್ನು ಗಣನೆಗೆ ತೆಗೆದುಕೊಂಡು ದರ ನಿಗದಿ ಮಾಡಲಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಮೆಟ್ರೋ ಸ್ಟೇಷನ್ಗಳಿಗೂ PSD ಅಳವಡಿಸಲು 700 ರಿಂದ 800 ಕೋಟಿ ರೂಪಾಯಿ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದ್ದು, ಈ ಹಿನ್ನೆಲೆಯಲ್ಲಿ ಮೆಟ್ರೋ ಟಿಕೆಟ್ ದರ ಹೆಚ್ಚಿಸುವ ಕುರಿತು ಬಿಎಂಆರ್ಸಿಎಲ್ ಚಿಂತನೆ ನಡೆಸಿದೆ ಎಂದು ಹೇಳಲಾಗಿದೆ.