ಬೆಂಗಳೂರು: ನಗರದಲ್ಲಿ ಪಾನಮತ್ತ ಹಾಗೂ ಅತಿವೇಗದ ಚಾಲನೆ ತಡೆಯಲು ಬೆಂಗಳೂರು ಸಂಚಾರ ಪೊಲೀಸರು (Bengaluru Traffic Police) ವಿಶೇಷ ಕಾರ್ಯಾಚರಣೆ ನಡೆಸಿದ್ದಾರೆ. ಸಂಚಾರ ನಿಯಮ ಉಲ್ಲಂಘಿಸಿದವರ ವಿರುದ್ಧ ಕಳೆದ ಒಂದು ವಾರದಲ್ಲಿ 1,000ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಿ, ₹2.30 ಲಕ್ಷ ದಂಡ ವಿಧಿಸಲಾಗಿದೆ.
ಜನವರಿ 27ರಿಂದ ಫೆಬ್ರವರಿ 2ರವರೆಗೆ ನಗರದ 50 ಸಂಚಾರ ಠಾಣೆಗಳ ವ್ಯಾಪ್ತಿಯಲ್ಲಿ ಈ ಕಾರ್ಯಾಚರಣೆ ನಡೆದಿದೆ. ಒಟ್ಟು 62,300 ವಾಹನಗಳ ಪರಿಶೀಲನೆಯಿಂದ 800 ಚಾಲಕರು ಮದ್ಯಪಾನ ಮಾಡಿ ವಾಹನ ಚಲಾಯಿಸಿರುವುದು ಬೆಳಕಿಗೆ ಬಂದಿದೆ. ಅದೇ ರೀತಿ, 228 ವಾಹನಗಳು ಅತಿವೇಗದಲ್ಲಿ ಚಲಿಸಿದ ಕಾರಣ ಪ್ರಕರಣ ದಾಖಲಾಗಿದ್ದು, ₹2.30 ಲಕ್ಷ ದಂಡ ವಿಧಿಸಲಾಗಿದೆ ಎಂದು ಸಂಚಾರ ಪೊಲೀಸ್ ಜಂಟಿ ಆಯುಕ್ತ ಎಂ.ಎನ್. ಅನುಚೇತ್ ತಿಳಿಸಿದ್ದಾರೆ.
ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಕಟ್ಟುನಿಟ್ಟಾದ ಅನುಷ್ಠಾನಕ್ಕಾಗಿ ಈ ವಿಶೇಷ ಕಾರ್ಯಾಚರಣೆ ಮುಂದುವರಿಯಲಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ತಿಳಿಸಿದ್ದಾರೆ.