back to top
26.7 C
Bengaluru
Sunday, October 26, 2025
HomeKarnatakaBidarಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಿಗೆ ಗೌರವ

ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕರಿಗೆ ಗೌರವ

- Advertisement -
- Advertisement -

Bidar : ಸಾರ್ವಜನಿಕ ಶಿಕ್ಷಣ ಇಲಾಖೆಯ ನೂತನ ಉಪನಿರ್ದೇಶಕ (Joint Director, Department Of Public Instruction) ಗಣಪತಿ ಬಾರಾಟಕೆ ಅವರನ್ನು ಕರ್ನಾಟಕ ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ವತಿಯಿಂದ ಬೀದರ್ ನಗರದ ಉಪ ನಿರ್ದೇಶಕರ ಕಚೇರಿಯಲ್ಲಿ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಶಿವರಾಜ ಕಪಲಾಪೂರೆ ಅವರು ಶಾಲು ಹೊದಿಸಿ ಹೂಮಾಲೆ ಹಾಕಿ ಸತ್ಕರಿಸಿದರು.

ಸನ್ಮಾನ ಸ್ವೀಕರಿಸಿ ಮಾತನಾಡಿದ ಗಣಪತಿ ಬಾರಾಟಕೆ “ಎಲ್ಲರೂ ಒಗ್ಗೂಡಿ ಜಿಲ್ಲೆಯ ಶೈಕ್ಷಣಿಕ ಪ್ರಗತಿಗೆ ಶ್ರಮಿಸೋಣ” ಎಂದು ಹೇಳಿದರು.

ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ರಾಜೇಂದ್ರಕುಮಾರ ಗಂದಗೆ, ಉಪಾಧ್ಯಕ್ಷ ಪಾಂಡುರಂಗ ಬೆಲ್ದಾರ್, ಸಂಘದ ಗೌರವಾಧ್ಯಕ್ಷ ಬಸವರಾಜ ಜಕ್ಕಾ, ಪ್ರಧಾನ ಕಾರ್ಯದರ್ಶಿ ರಾಜಶೇಖರ ಮಂಗಲಗಿ, ಸಂಜುಕುಮಾರ ಸೂರ್ಯವಂಶಿ, ಕ್ಷೇತ್ರ ಶಿಕ್ಷಣಾಧಿಕಾರಿ ಸೂರ್ಯಕಾಂತ ಮದಾನೆ, ರಾಜ್ಯ ಸರ್ಕಾರಿ ಹಿರಿಯ ಹಾಗೂ ಪದವೀಧರೇತರ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರ ಸಂಘದ ಜಿಲ್ಲಾ ಘಟಕದ ಪ್ರಧಾನ ಕಾರ್ಯದರ್ಶಿ ಮಹಮ್ಮದ್ ನಜೀಬೊದ್ದಿನ್, ಸಂಘಟನಾ ಕಾರ್ಯದರ್ಶಿ ಸೈಯದ್ ಅಸ್ಲಂ, ಖಜಾಂಚಿ ನರಸಪ್ಪ ಕೀರ್ತಿ, ಬೀದರ್ ತಾಲ್ಲೂಕು ಘಟಕದ ಗೌರವಾಧ್ಯಕ್ಷೆ ಶೋಭಾವತಿ ಜಂಜೀರೆ, ಅಧ್ಯಕ್ಷ ಬಾಬುರಾವ್ ಮಜಗೆ, ನರಸಪ್ಪ ಹಾಲಹಳ್ಳಿ, ವಾಚುಸಿಂಗ್ ರಾಠೋಡ್, ಶೇಕ್ ಅಹಮ್ಮದ್, ಮಕ್ಸೂದ್ ಅಲಿ, ಸುಲೋಚನಾ, ವೈಜಿನಾಥ ಸಾಗರ್, ಸುರೇಶ ಟಾಳೆ, ಗಣಪತಿ ಭಕ್ತಾ, ದೇವಿಪ್ರಸಾದ್ ಕಲಾಲ್, ಶ್ರೀಪತಿ ಮೇತ್ರೆ, ಡಿಡಿಪಿಐ ಕಚೇರಿ ಸಿಬ್ಬಂದಿ ಉಪಸ್ಥಿತರಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page