New Delhi : ರಾಜ್ಯದ ಹಿತದೃಷ್ಟಿಯಿಂದ ಕೆಲಸ ಮಾಡಲು ವಿರೋಧ ಪಕ್ಷವಾಗಿ ಬಿಜೆಪಿಯೊಂದಿಗೆ ಸಹಕರಿಸಲು ತಮ್ಮ ಪಕ್ಷ ನಿರ್ಧರಿಸಿದೆ ಎಂದು ಕರ್ನಾಟಕದ ಮಾಜಿ ಮುಖ್ಯಮಂತ್ರಿ ಮತ್ತು JDS ನಾಯಕ ಎಚ್ ಡಿ ಕುಮಾರಸ್ವಾಮಿ (H D Kumaraswamy) ಹೇಳಿದ್ದಾರೆ.
ಪಕ್ಷದ ವರಿಷ್ಠರು ಹಾಗೂ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಪಕ್ಷಕ್ಕಾಗಿ ಈ ನಿರ್ಧಾರ ಕೈಗೊಳ್ಳುವ ಅಧಿಕಾರ ನೀಡಿದ್ದಾರೆ ಎಂದು ಅವರು ತಿಳಿಸಿದರು. 2024ರ ಲೋಕಸಭೆ ಚುನಾವಣೆಗೆ ಎನ್‌ಡಿಎ ಜತೆ ಮೈತ್ರಿ ಮಾಡಿಕೊಳ್ಳುವ ಕುರಿತು ಚರ್ಚೆ ನಡೆಯಲಿದ್ದು, ಸಂಸತ್ ಚುನಾವಣೆಗೆ ಇನ್ನೂ ಸಮಯವಿರುವುದರಿಂದ ಆನಂತರ ಪರಿಗಣಿಸಲಾಗುವುದು ಎಂದು ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬಿಜೆಪಿ ಮತ್ತು ಜೆಡಿಎಸ್ ಎರಡೂ ವಿರೋಧ ಪಕ್ಷಗಳಾಗಿದ್ದು, ರಾಜ್ಯದ ಹಿತಕ್ಕಾಗಿ ಒಟ್ಟಾಗಿ ಕೆಲಸ ಮಾಡಲು ನಿರ್ಧರಿಸಿದ್ದೇವೆ ಎಂದು ಅವರು ಹೇಳಿದ್ದಾರೆ. ಎಲ್ಲಾ ಜಿಲ್ಲೆಗಳಲ್ಲಿ ಕಾಂಗ್ರೆಸ್ ಸರ್ಕಾರದ ದುರಾಡಳಿತದ ವಿರುದ್ಧ ಧ್ವನಿ ಎತ್ತಲು ಎಲ್ಲಾ ಸಮುದಾಯಗಳ ಪ್ರಾತಿನಿಧ್ಯದೊಂದಿಗೆ 10 ಸದಸ್ಯರ ತಂಡವನ್ನು ರಚಿಸುವುದಾಗಿ ಪಕ್ಷವು ತಿಳಿಸಿದೆ.