ದೆಹಲಿಯಲ್ಲಿ ಇಂದು ನಡೆಯಬೇಕಿದ್ದ ಬಿಜೆಪಿ ಶಾಸಕಾಂಗ ಪಕ್ಷದ ಸಭೆ (Legislative Assembly) ಮುಂದೂಡಲಾಗಿದೆ. ಈ ಸಭೆ ಸೋಮವಾರ ಮಧ್ಯಾಹ್ನ 3 ಗಂಟೆಗೆ ಕರೆಯಲಾಗಿತ್ತು, ಶಾಸಕಾಂಗ ನಾಯಕನ, ಅಂದರೆ ಮುಖ್ಯಮಂತ್ರಿಯ ಆಯ್ಕೆ ನಡೆಯಬೇಕಾಗಿತ್ತು. ಇದರೊಂದಿಗೆ, ಪ್ರಮಾಣವಚನ ಸಮಾರಂಭವೂ ಈಗ ಮುಂದೂಡಿಕೆಯಾಗಿದೆ.
ಹೊಸ ದಿನಾಂಕಗಳು
- ಶಾಸಕಾಂಗ ಸಭೆ: ಫೆಬ್ರವರಿ 19
- ಪ್ರಮಾಣವಚನ: ಫೆಬ್ರವರಿ 20
ತಡರಾತ್ರಿ ಬಿ.ಎಲ್. ಸಂತೋಷ್, ಪಕ್ಷದ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದ್ದು, ಈ ನಿರ್ಧಾರ ಕೈಗೊಳ್ಳಲಾಗಿದೆ. ವೀರೇಂದ್ರ ಸಚ್ದೇವ, ಪವನ್ ರಾಣಾ ಮತ್ತು ಇತರರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಎಲ್ಲಾ ಬಿಜೆಪಿ ಶಾಸಕರು ದೆಹಲಿಯಲ್ಲಿಯೇ ಇರಲು ಪಕ್ಷದ ಹೈಕಮಾಂಡ್ ಸೂಚನೆ ನೀಡಿದೆ. ಆದರೆ, ಮುಖ್ಯಮಂತ್ರಿ ಆಯ್ಕೆಗೆ ಸಂಬಂಧಿಸಿದ ನಿರ್ಧಾರ ಇನ್ನೂ ಪ್ರಕಟವಾಗಿಲ್ಲ.
ಮುಖ್ಯಮಂತ್ರಿ ಹುದ್ದೆಗೆ ಪರ್ವೇಶ್ ವರ್ಮಾ, ವಿಜೇಂದರ್ ಗುಪ್ತಾ, ಸತೀಶ್ ಉಪಾಧ್ಯಾಯ ಮುಂಚೂಣಿಯಲ್ಲಿದ್ದಾರೆ. ಪವನ್ ಶರ್ಮಾ, ಆಶಿಶ್ ಸೂದ್, ರೇಖಾ ಗುಪ್ತಾ, ಶಿಖಾ ರೈ ಅವರ ಹೆಸರುಗಳೂ ಸಹ ಚರ್ಚೆಯಲ್ಲಿವೆ.
ಬಿಜೆಪಿ ಹೊಸದಾಗಿ ಆಯ್ಕೆಯಾದ ಶಾಸಕರಿಗೆ ಅವಕಾಶ ನೀಡುವ ಸಾಧ್ಯತೆ ಇದೆ. ರಾಜಸ್ಥಾನ, ಹರಿಯಾಣ, ಮಧ್ಯಪ್ರದೇಶ, ಒಡಿಶಾ, ಛತ್ತೀಸ್‌ಗಡದ ಮಾದರಿಯಲ್ಲಿ ಹೊಸ ಮುಖಗಳಿಗೆ ಪ್ರಮುಖ ಸ್ಥಾನ ನೀಡುವ ಬಗ್ಗೆ ಚಿಂತನೆ ನಡೆದಿದೆ.
ಫೆಬ್ರವರಿ 5ರಂದು ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿದ ಬಿಜೆಪಿ 26 ವರ್ಷಗಳ ನಂತರ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಈ ಮೂಲಕ ಆಮ್ ಆದ್ಮಿ ಪಕ್ಷದ (AAP) 10 ವರ್ಷಗಳ ಆಳ್ವಿಕೆಗೆ ಅಂತಿಮ ತೆರೆ ಎಳೆಯಲಾಗಿದೆ. 70 ಸ್ಥಾನಗಳ ಪೈಕಿ 48 ಸ್ಥಾನಗಳನ್ನು ಗೆದ್ದು, ಬಿಜೆಪಿ ಸ್ಪಷ್ಟ ಬಹುಮತ ಗಳಿಸಿದೆ.