HomeKarnatakaSP Uma Prashanth ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ BJP ಶಾಸಕ ಬಿಪಿ ಹರೀಶ್

SP Uma Prashanth ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿದ BJP ಶಾಸಕ ಬಿಪಿ ಹರೀಶ್

- Advertisement -
- Advertisement -

Davanagere: ದಾವಣಗೆರೆ SP ಉಮಾ ಪ್ರಶಾಂತ್ರ (SP Uma Prashanth) ವಿರುದ್ಧ ಬಿಜೆಪಿ ಶಾಸಕ ಬಿಪಿ ಹರೀಶ್ ನೀಡಿದ ಆಕ್ಷೇಪಾರ್ಹ ಹೇಳಿಕೆಯಿಂದ ಈಗ ದೊಡ್ಡ ವಿವಾದ ಉಂಟಾಗಿದೆ. ಈ ಹೇಳಿಕೆಯ ಹಿನ್ನೆಲೆ ಶಾಸಕರ ವಿರುದ್ಧ ಕೆಟಿಜೆ ನಗರ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.

ಸೆಪ್ಟೆಂಬರ್ 02ರಂದು ದಾವಣಗೆರೆಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಬಿಪಿ ಹರೀಶ್, SP ಉಮಾ ಪ್ರಶಾಂತ್ರ ಬಗ್ಗೆ ಕೀಳುಮಟ್ಟದ ಪದಗಳನ್ನು ಬಳಸಿದ್ದರು. ಇದಕ್ಕೆ ಆಕ್ರೋಶ ವ್ಯಕ್ತವಾದ ಹಿನ್ನೆಲೆಯಲ್ಲಿ ಎಸ್ಪಿ ತಾವೇ ಪೊಲೀಸರಿಗೆ ದೂರು ನೀಡಿದ್ದಾರೆ.

ಶಾಸಕರ ಪದ ಬಳಕೆಯನ್ನು ಸಾಮಾಜಿಕ ಜಾಲತಾಣದಲ್ಲಿ ತೀವ್ರವಾಗಿ ಖಂಡಿಸಲಾಗಿದೆ. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾ ಕೂಡ SP ಪರ ನಿಂತು, ಬಿಪಿ ಹರೀಶ್ ತಕ್ಷಣ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದೆ. ಉಮಾ ಪ್ರಶಾಂತ್ರ ಸೇವೆಯನ್ನು ಮೆಚ್ಚಿ, ಅವರು ಜಿಲ್ಲೆಯಲ್ಲಿ ಮಾಡಿದ ಪ್ರಮುಖ ಕಾರ್ಯಗಳನ್ನು ನೆನಪಿಸಿದ್ದಾರೆ.

ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ ಕೂಡಾ ಬಿಪಿ ಹರೀಶ್ ಹೇಳಿಕೆಯನ್ನು ಖಂಡಿಸಿದ್ದಾರೆ. ಇಂತಹ ಪದಪ್ರಯೋಗವು ಶಾಸಕರ ಮನಸ್ಥಿತಿಯನ್ನು ತೋರಿಸುತ್ತದೆ ಎಂದಿದ್ದಾರೆ.

ಪೊಲೀಸರು ಈಗಾಗಲೇ ಪ್ರಕರಣ ದಾಖಲಿಸಿದ್ದಾರೆ. ನಿನ್ನೆ ರಾತ್ರಿ ಶಾಸಕರ ಮನೆಯಲ್ಲಿ ಪೊಲೀಸರು ಭೇಟಿಯಾಗಿ ವಿಚಾರಣೆಗೆ ಹಾಜರಾಗುವಂತೆ ಅವರ ಕುಟುಂಬಕ್ಕೆ ತಿಳಿಸಿದ್ದಾರೆ. ಬಿಪಿ ಹರೀಶ್ ಇಂದು ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!