Search
WhatsApp alerts

Home › Dakshina Kannada

BJP ಯುವ ಮೋರ್ಚಾ ಮುಖಂಡನ ಕೊಲೆ

administrator · Published

BJP Praveen Nettaru Murder

Sullia, Dakshina Kannada : ಸುಳ್ಳ್ಯದ BJP ಯುವ ಮೋರ್ಚಾ ಮುಖಂಡ ಪ್ರವೀಣ್ (32) (Praveen Nettaru) ರನ್ನು ದುಷ್ಕರ್ಮಿಗಳು ಸುಳ್ಯ ತಾಲೂಕಿನ ಬೆಳ್ಳಾರೆ (Bellare) ಸಮೀಪದ ನೆಟ್ಟಾರಿನಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ (Murder) ಮಾಡಿದ್ದಾರೆ.

ಚಿಕನ್ ಅಂಗಡಿಯ ಮಾಲೀಕನಾಗಿದ್ದ ಪ್ರವೀಣ್ ನೆಟ್ಟಾರು ಗಂಭೀರ ಗಾಯಗೊಂಡಿದ್ದರಿಂದ ಸ್ಥಳದಲ್ಲೇ ಕುಸಿದು ಬಿದ್ದರು ಮತ್ತು ಅವರನ್ನು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ಹೇಳಲಾಗಿದೆ. ಪ್ರವೀಣ್ ರ ಹತ್ಯೆ ಖಂಡಿಸಿ ಪುತ್ತೂರು (Puttur), ಬೆಳ್ಳಾರೆ, ಸುಳ್ಯ, ಕಡಬ (Kadaba) ಪಟ್ಟಣಗಳಲ್ಲಿ ಸ್ವಯಂಘೋಷಿತ ಬಂದ್​​​ಗೆ ಹಿಂದುತ್ವ ಪರ ಸಂಘಟನೆಗಳು ಕರೆ ನೀಡಿವೆ. ಹಂತಕರಿಗಾಗಿ ಪೊಲೀಸರು (Police) ಶೋಧಿಸುತ್ತಿದ್ದಾರೆ.

ಮೃತರ ಆತ್ಮಕ್ಕೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ (Basavaraj Bommai), ಪ್ರಮೋದ್ ಮುತಾಲಿಕ್ (Pramod Muthalik), ಶೋಭ ಕರಂದ್ಲಾಜೆ (Shobha Karandlaje) ಸೇರಿದಂತೆ ಅನೇಕರು ಸಂತಾಪ ಸೂಚಿಸಿದ್ದಾರೆ.

For Daily Updates WhatsApp ‘HI’ to 7406303366

Read next

ಹೃದಯದ ಆರೋಗ್ಯ ಕಾಪಾಡಿ: ವಿಶ್ವ ಹೃದಯ ದಿನದಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ.ಚೇತನ್ ಕಿವಿಮಾತು

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಆಗ್ನೇಯ ಪದವೀಧರ ಕ್ಷೇತ್ರ ಚುನಾವಣೆಗೆ ಸಹಾಯವಾಣಿ ಕೇಂದ್ರ ಸ್ಥಾಪನೆ

ಹಿರಿಯ ನಾಗರಿಕರ ಕುಂದುಕೊರತೆ ಪರಿಹಾರಕ್ಕೆ ಅಧಿಕಾರಿಗಳಿಗೆ ಡಿಸಿ ಕಟ್ಟುನಿಟ್ಟಿನ ಸೂಚನೆ

ಕೆಎಸ್‌ಆರ್‌ಟಿಸಿಯಲ್ಲಿ ಅಪ್ರೆಂಟೀಸ್ ತರಬೇತಿಗೆ ಅರ್ಜಿ ಆಹ್ವಾನ

You cannot copy content of this page

Exit mobile version