Mangalore: ದಕ್ಷಿಣ ಕನ್ನಡ ಮತ್ತು ಉಡುಪಿ (Dakshina Kannada and Udupi) ಜಿಲ್ಲೆಗಳ ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್ತಿಗೆ (Vidhana Parishat) ನಡೆದ ಉಪಚುನಾವಣೆಯಲ್ಲಿ (Council by Election) ಬಿಜೆಪಿ ಅಭ್ಯರ್ಥಿ ಕಿಶೋರ್ ಕುಮಾರ್ ಪುತ್ತೂರು (Kishor Kumar Puttur) ಅವರು ಗೆಲುವು ಸಾಧಿಸಿದ್ದಾರೆ.
ಕೋಟ ಶ್ರೀನಿವಾಸ ಪೂಜಾರಿ ಉಡುಪಿ ಚಿಕ್ಕಮಗಳೂರು ಕ್ಷೇತ್ರದ ಸಂಸದರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಅವರು ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರಿಂದ ಅ.21 ರಂದು ಉಪಚುನಾವಣೆ ನಡೆದಿದ್ದು, ಸೋಮವಾರ ನಡೆದ ಚುನಾವಣೆಯಲ್ಲಿ ಒಟ್ಟು 392 ಮತಗಟ್ಟೆಗಳಲ್ಲಿ 5,906 ಮತದಾರರು ಮತ ಚಲಾಯಿಸಿದ್ದರು.
ಇಂದು ನಗರದ ಸಂತ ಅಲೋಷಿಯಸ್ ಪದವಿ ಪೂರ್ವ ಕಾಲೇಜಿನಲ್ಲಿ ಎಣಿಕೆ ನಡೆದಿದ್ದು, ಇದರಲ್ಲಿ ಬಿಜೆಪಿ ಅಭ್ಯರ್ಥಿಯು 3655 ಮತ, ಕಾಂಗ್ರೆಸ್ 1958, ಎಸ್ಡಿಪಿಐ 195, ಪಕ್ಷೇತರ 9 ಮತ್ತು 90 ಅಸಿಂಧು ಮತಗಳಾಗಿವೆ. ಈ ಮೂಲಕ ಬಿಜೆಪಿಯ ಕಿಶೋರ್ ಕುಮಾರ್ ಗೆಲುವು ಸಾಧಿಸಿದ್ದು, ಬಿಜೆಪಿ ತನ್ನ ಸ್ಥಾನ ಉಳಿಸಿಕೊಳ್ಳುವಲ್ಲಿ ಯಶಸ್ವಿಯಾಗಿದೆ.