Bengaluru: ಧರ್ಮಸ್ಥಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲನ ಉಂಟಾಗಿದೆ. BJP ನಾಯಕರು ಧರ್ಮಸ್ಥಳ ಚಲೋ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರೆ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (DCM DK Shivakumar) ಅವರು ತೀವ್ರ ಆರೋಪ ಮಾಡಿದ್ದಾರೆ.
ಡಿಕೆ ಶಿವಕುಮಾರ್ ಅವರ ಪ್ರಕಾರ, ಈ ಪ್ರಕರಣದಲ್ಲಿ ಬಿಜೆಪಿಯ ಮೂಲ ಕಾರ್ಯಕರ್ತರೇ ಷಡ್ಯಂತ್ರ ರೂಪಿಸಿದ್ದಾರೆ. ತನಿಖೆ ನಡೆಸುತ್ತಿರುವ SIT ಕುರಿತು BJP ಅಸಮಾಧಾನ ವ್ಯಕ್ತಪಡಿಸುತ್ತಿದೆ. ಆದರೆ ಇದೇ ಎಸ್ಐಟಿಗೆ ಮೊದಲು ಅವರು ಸ್ವಾಗತ ಹೇಳಿದ್ದಾರೆ. ಈಗ ತಮ್ಮ ಆಂತರಿಕ ಬಣಕಚ್ಚಾಟವನ್ನು ಮರೆಮಾಚಲು ನಾಟಕ ಮಾಡುತ್ತಿದ್ದಾರೆ ಎಂದು ಡಿಕೆಶಿ ಹೇಳಿದ್ದಾರೆ.
ಬಿಜೆಪಿ ನಾಯಕರು ಎನ್ಐಎ ತನಿಖೆ ಬೇಕು ಎಂದು ಹೇಳುತ್ತಿದ್ದರೂ, ಧರ್ಮಸ್ಥಳಕ್ಕೆ ನ್ಯಾಯ ಸಿಗಬೇಕೆಂದು ಅವರು ಎಂದಿಗೂ ಆಗ್ರಹಿಸಿಲ್ಲ. ಧರ್ಮಸ್ಥಳದ ಆಡಳಿತ ಮಂಡಳಿಗೆ ಕಪ್ಪು ಚುಕ್ಕೆ ತರಲು ಬಿಜೆಪಿ ಕಾರ್ಯಕರ್ತರೇ ವ್ಯವಸ್ಥಿತವಾಗಿ ಯೋಜನೆ ರೂಪಿಸಿದ್ದಾರೆ ಎಂದು ಡಿಕೆಶಿ ಆರೋಪಿಸಿದರು.
ಡಿಕೆ ಶಿವಕುಮಾರ್ ಅವರ ಈ ಹೇಳಿಕೆಯಿಂದ ರಾಜ್ಯ ರಾಜಕೀಯದಲ್ಲಿ ಚರ್ಚೆ ಗರಿಷ್ಠ ಮಟ್ಟಕ್ಕೇರಿದೆ. ವಿರೋಧ ಪಕ್ಷದ ನಾಯಕರು “ಷಡ್ಯಂತ್ರ ಯಾರದ್ದು?” ಎಂಬ ಪ್ರಶ್ನೆಗೆ ಸ್ಪಷ್ಟನೆ ನೀಡಬೇಕೆಂದು ಆಗ್ರಹಿಸಿದರೂ, ಡಿಕೆಶಿ ಇದೀಗ ನೇರವಾಗಿ “ಬಿಜೆಪಿಯದ್ದೇ ಷಡ್ಯಂತ್ರ” ಎಂದು ಬಾಂಬ್ ಸಿಡಿಸಿದ್ದಾರೆ.