back to top
26.7 C
Bengaluru
Wednesday, July 30, 2025
HomeIndiaAndhra PradeshTirupati ಯ ISKCON temple ಗೆ ಬಾಂಬ್ ಬೆದರಿಕೆ

Tirupati ಯ ISKCON temple ಗೆ ಬಾಂಬ್ ಬೆದರಿಕೆ

- Advertisement -
- Advertisement -

Tirupati: ಆಂಧ್ರಪ್ರದೇಶದ (Andhra Pradesh) ತಿರುಪತಿಯ ಹೋಟೆಲ್​​ಗಳಿಗೆ ಬಾಂಬ್ ಬೆದರಿಕೆ ಸಂದೇಶಗಳು ಬಂದ ಬೆನ್ನಲ್ಲೇ ಇದೀಗ ಜಿಲ್ಲೆಯ ISKCON ದೇವಸ್ಥಾನಕ್ಕೆ ಬಾಂಬ್ ಬೆದರಿಕೆ (Bomb Threat) ಸಂದೇಶ ಬಂದಿದೆ. ಈ ಹಿನ್ನೆಲೆಯಲ್ಲಿ ದೇಗುಲದ ಭದ್ರತೆಯನ್ನು ಹೆಚ್ಚಿಸಲಾಗಿದೆ. ಪೊಲೀಸರ ಪ್ರಕಾರ, ಇಸ್ಕಾನ್ ದೇವಾಲಯದ ಸಿಬ್ಬಂದಿಗೆ ಅಕ್ಟೋಬರ್ 27 ರಂದು ಬೆದರಿಕೆ ಸಂದೇಶ ಬಂದಿದೆ.

ಪಾಕಿಸ್ತಾನದ(Pakistan) ISI ಜತೆ ನಂಟು ಹೊಂದಿರುವ ಭಯೋತ್ಪಾದಕರು ದೇವಾಲಯವನ್ನು ಸ್ಫೋಟಿಸಲಿದ್ದಾರೆ ಎಂದು ದೇಗುಲದ ಸಿಬ್ಬಂದಿಗೆ ಇ-ಮೇಲ್ ಸಂದೇಶ ಬಂದಿದೆ. ಬೆದರಿಕೆ ಇ-ಮೇಲ್ (e-mail) ಬಂದ ಬೆನ್ನಲ್ಲೇ, ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ತಂಡಗಳು ಸ್ಥಳಕ್ಕೆ ತಲುಪಿದ್ದು, ದೇವಾಲಯದಲ್ಲಿ ಶೋಧ ಕಾರ್ಯಾಚರಣೆಯನ್ನು ನಡೆಸಿವೆ.

ದೇವಸ್ಥಾನದ ಆವರಣದಲ್ಲಿ ಸ್ಫೋಟಕ ಅಥವಾ ಇತರ ಯಾವುದೇ ಆಕ್ಷೇಪಾರ್ಹ ವಸ್ತುಗಳು ಪತ್ತೆಯಾಗಿಲ್ಲ. ದೇವಸ್ಥಾನಕ್ಕೆ ಬಾಂಬ್ ಬೆದರಿಕೆ ಬಂದ ಹಿನ್ನೆಲೆಯಲ್ಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ನಗರದ ಪ್ರತಿ ಹೋಟೆಲ್‌ಗಳಲ್ಲಿ ತಪಾಸಣೆ ನಡೆಸಿದ್ದರು. ಬಾಂಬ್ ನಿಷ್ಕ್ರಿಯ ದಳ ಮತ್ತು ಶ್ವಾನ ದಳದ ಸಂಪೂರ್ಣ ಶೋಧದ ನಂತರ ಪೋಲಿಸರು ಹುಸಿ ಬಾಂಬ್ ಕರೆ ಎಂದು ದೃಢಪಡಿಸಿದ್ದರು.

Tirupati Airport ಗೂ ಬಾಂಬ್ ಬೆದರಿಕೆ

ತಿರುಪತಿ ವಿಮಾನ ನಿಲ್ದಾಣಕ್ಕೆ ಕೂಡ ಭಾನುವಾರ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಬಂದಿತ್ತು. ಬೆದರಿಕೆ ಇ-ಮೇಲ್ ಕುರಿತು ವಿಮಾನ ನಿಲ್ದಾಣ ಪ್ರಾಧಿಕಾರದ ಅಧಿಕಾರಿಗಳು ಪೊಲೀಸರಿಗೆ ದೂರು ನೀಡಿದ್ದರು. ಇಮೇಲ್ ಆಧರಿಸಿ ಅಧಿಕಾರಿಗಳು ಆರೋಪಿಗಳ ಪತ್ತೆಗೆ ತಂಡಗಳನ್ನು ರಚಿಸಿದ್ದಾರೆ.

ತಿರುಪತಿಯಲ್ಲಿ ಸತತ ಬಾಂಬ್ ಬೆದರಿಕೆ ಸಂದೇಶಗಳಿಂದ ಭಕ್ತರು ಭಯಭೀತರಾಗಿದ್ದಾರೆ. ಇದರಿಂದ ಬೆದರಿಕೆ ಹಾಕುತ್ತಿದ್ದವರ ಪತ್ತೆಗೆ ಕಠಿಣ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆರೋಪಿಗಳನ್ನು ಶೀಘ್ರ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page