New Delhi: ಬ್ರಿಕ್ಸ್ ಶೃಂಗಸಭೆ(BRICS Summit)ಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ನರೇಂದ್ರ ಮೋದಿ (PM Narendra Modi) ಇಂದು ರಷ್ಯಾಗೆ ತೆರಳಿದ್ದಾರೆ. ಪ್ರಧಾನಿ ಮೋದಿ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರನ್ನು ಭೇಟಿ ಮಾಡುವ ನಿರೀಕ್ಷೆಯಿದೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (Ministry of External Affairs-MEA) ತಿಳಿಸಿದೆ.
ಚೀನಾ ಅಧ್ಯಕ್ಷ ಷಿ ಜಿನ್ಪಿಂಗ್ ಮತ್ತು ಇತರ ಬ್ರಿಕ್ಸ್ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆಗಳನ್ನು ನಡೆಸಬಹುದು. ರಷ್ಯಾ-ಉಕ್ರೇನಿಯನ್ ಯುದ್ಧ ಮತ್ತು ನಡೆಯುತ್ತಿರುವ ಜಾಗತಿಕ ಪ್ರಕ್ಷುಬ್ಧತೆಯಂತಹ ಪ್ರಮುಖ ವಿಷಯಗಳನ್ನು ಒಳಗೊಂಡಿರುವ ಸಾಧ್ಯತೆಯಿದೆ.
ಶೃಂಗಸಭೆ ವೇಳೆ ಪ್ರಧಾನಿ ಮೋದಿ ಅವರು, ಬ್ರಿಕ್ಸ್ ಸದಸ್ಯ ರಾಷ್ಟ್ರಗಳ ಪ್ರಧಾನ ಮಂತ್ರಿಗಳು ಮತ್ತು ಕಜಾನ್ನಲ್ಲಿ ಆಹ್ವಾನಿತ ನಾಯಕರೊಂದಿಗೆ ದ್ವಿಪಕ್ಷೀಯ ಸಭೆಗಳನ್ನು ನಡೆಸುವ ನಿರೀಕ್ಷೆಯಿದೆ. ‘
ಜಾಗತಿಕ ಅಭಿವೃದ್ಧಿ ಮತ್ತು ಭದ್ರತೆಗಾಗಿ ಬಹುಪಕ್ಷೀಯತೆಯನ್ನು ಬಲಪಡಿಸುವ’ ಥೀಮ್ ನ ಶೃಂಗಸಭೆಯು ಪ್ರಮುಖ ಜಾಗತಿಕ ಸಮಸ್ಯೆಗಳನ್ನು ಚರ್ಚಿಸಲು ನಾಯಕರಿಗೆ ಪ್ರಮುಖ ವೇದಿಕೆಯನ್ನು ಒದಗಿಸುತ್ತದೆ ಎಂದು MEA ಹೇಳಿದೆ.
ಕಳೆದ ತಿಂಗಳು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಆಹ್ವಾನವನ್ನು ನೀಡಿದರು. ಆ ಸಂದರ್ಭದಲ್ಲಿ ಪ್ರಧಾನಿ ಮೋದಿಯನ್ನು ಉತ್ತಮ ಸ್ನೇಹಿತ ಎಂದು ಕರೆದಿದ್ದರು.
ಇದು ಈ ವರ್ಷ ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡುತ್ತಿರುವ ಎರಡನೇ ಭೇಟಿಯಾಗಿದೆ.ಈ ವೇಳೆ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರೊಂದಿಗೆ ದ್ವಿಪಕ್ಷೀಯ ಸಭೆಯನ್ನು ಪ್ರಧಾನಿ ಮೋದಿ ನಡೆಸಲಿದ್ದಾರೆ.