Home Karnataka Chikkaballapura ಲಾರಿಗೆ ಟಾಟಾ ಸುಮೊ ಡಿಕ್ಕಿ : 12 ಜನ ಮೃತ

ಲಾರಿಗೆ ಟಾಟಾ ಸುಮೊ ಡಿಕ್ಕಿ : 12 ಜನ ಮೃತ

Chikkaballapur : ಇಂದು (ಗುರುವಾರ) ನಸುಕಿನ ವೇಳೆ ಚಿಕ್ಕಬಳ್ಳಾಪುರ ಹೊರವೊಲಯದಲ್ಲಿರುವ ಚಿತ್ರಾವತಿ ಬಳಿಯ ಸಂಚಾರಿ ಪೊಲೀಸ್ ಠಾಣೆ ಮುಂದೆ ರಸ್ತೆ ಬದಿ ನಿಂತಿದ್ದ ಬಲ್ಕರ್ ಲಾರಿಗೆ(Bulker Lorry) ಟಾಟಾ ಸುಮೊ (Tata Sumo) ಡಿಕ್ಕಿ (Accident) ಹೊಡೆದ ಪರಿಣಾಮ ಟಾಟಾ ಸುಮೊದಲ್ಲಿದ್ದ 12 ಜನ ಮೃತಪಟ್ಟಿದ್ದಾರೆ.

ದಟ್ಟ ಮಂಜು ಹಿನ್ನೆಲೆಯಲ್ಲಿ ಸರಿಯಾಗಿ ರಸ್ತೆ ಕಾಣಿಸದೆ ಬಾಗೇಪಲ್ಲಿಯಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಟಾಟಾ ಸುಮೊ ರಸ್ತೆಬಂದಿ ನಿಂತಿದ್ದ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದಿದೆ. ಗುದ್ದಿದ ರಬಸಕ್ಕೆ ಟಾಟಾ ಸುಮೊ ಮುಂದಿನ ಭಾಗ ನಜ್ಜುಗುಜ್ಜಾಗಿದ್ದು, ಘಟನೆಯಲ್ಲಿ ಮಹಿಳೆಯರು, ಮಕ್ಕಳು ಸೇರಿದಂತೆ ಒಟ್ಟು 12 ಜನ ಸಾವನ್ನಪ್ಪಿದ್ದಾರೆ. ಮೃತರನ್ನು ಆಂಧ್ರದ ಗೊರಂಟ್ಲ ನಿವಾಸಿಗಳು ಎಂದು ಗುರಿತಿಸಲಾಗಿದ್ದು ಅವರು ಗೋರಂಟ್ಲದಿಂದ ಬೆಂಗಳೂರಿನ ಬೊಮ್ಮನಹಳ್ಳಿಗೆ ಕೂಲಿ ಕೆಲಸಕ್ಕೆ ಹೋಗುತ್ತಿದ್ದವರು ಎಂದು ಪೊಲೀಸರು ತಿಳಿಸಿದರು.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಪೊಲೀಸ್ ವರಿಷ್ಠಾಧಿಕಾರಿ ಡಿ.ಎಲ್​.ನಾಗೇಶ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

For Daily Updates WhatsApp ‘HI’ to 7406303366

The post ಲಾರಿಗೆ ಟಾಟಾ ಸುಮೊ ಡಿಕ್ಕಿ : 12 ಜನ ಮೃತ appeared first on Chikkaballapur.

NO COMMENTS

LEAVE A REPLY

Please enter your comment!
Please enter your name here

You cannot copy content of this page

Exit mobile version