Bengaluru: ಚನ್ನಪಟ್ಟಣ ಉಪಚುನಾವಣೆ (Channapatna by-election) ಅಖಾಡದಲ್ಲಿ ಬುಧವಾರ ಮಹತ್ವದ ಬೆಳವಣಿಗೆಯಾಗಿದ್ದು, ಮಾಜಿ ಸಚಿವ ಹಾಗೂ ಐದು ಬಾರಿ ಶಾಸಕರಾಗಿದ್ದ ಯೋಗೇಶ್ವರ್ (C P Yogeshwar) ಬಿಜೆಪಿಗೆ ರಾಜೀನಾಮೆ ನೀಡಿ ಕಾಂಗ್ರೆಸ್ (Congress) ಸೇರಿದ್ದಾರೆ.
ಸಂಜೆಯ ವೇಳೆಗೆ, AICC ಚನ್ನಪಟ್ಟಣದಿಂದ ಅವರ ಉಮೇದುವಾರಿಕೆಯನ್ನು ಘೋಷಿಸಿದೆ. ಮತ್ತೊಂದೆಡೆ, ಬಳ್ಳಾರಿಯ (Bellary) ಸಂಸದ ಇ. ತುಕಾರಾಂ ಅವರ ಪತ್ನಿ ಇ ಅನ್ನಪೂರ್ಣ (E Annapurna) ಅವರು ಸಂಡೂರು (ST) ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಘೋಷಣೆ ಮಾಡಲಾಗಿದೆ.
ಅನ್ನಪೂರ್ಣ ಅವರು ಮೊದಲ ಬಾರಿಗೆ ಚುನಾವಣೆ ಸ್ಪರ್ಧಿಸುತ್ತಿದ್ದಾರೆ. ಯೋಗೇಶ್ವರ್ ಆರನೇ ಬಾರಿಗೆ ವಿಧಾನಸಭೆ ಪ್ರವೇಶಿಸಲು ಸ್ಪರ್ಧಿಸಿದ್ದಾರೆ. ಯೋಗೇಶ್ವರ್ ಅವರು ಇಂದು ನಾಮಪತ್ರ ಸಲ್ಲಿಸಲಿದ್ದಾರೆ.
ಶಿಗ್ಗಾಂವಿ, ಸಂಡೂರು, ಮತ್ತು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರಗಳು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ತುಕಾರಾಂ ಮತ್ತು JDS ನಾಯಕ ಹೆಚ್ಡಿ ಕುಮಾರಸ್ವಾಮಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಲು ರಾಜೀನಾಮೆ ನೀಡಿದ್ದರಿಂದ ತೆರವಾದ ಕ್ಷೇತ್ರಗಳಾಗಿವೆ.
ನವೆಂಬರ್ 13 ರಂದು ಚುನಾವಣೆ ನಡೆಯಲಿದ್ದು, ನವೆಂಬರ್ 23 ರಂದು ಫಲಿತಾಂಶ ಪ್ರಕಟವಾಗಲಿದೆ.