ಮುಂದಿನ ತಿಂಗಳಲ್ಲಿ ಇಂಗ್ಲೆಂಡ್ ಸರಣಿಯ ಪ್ರಾರಂಭಕ್ಕೂ ಮುನ್ನವೇ ಟೀಮ್ ಇಂಡಿಯಾದ ಸ್ಟಾರ್ ಆಟಗಾರರು ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ತಮ್ಮ ಟೆಸ್ಟ್ ಕ್ರಿಕೆಟ್ ಸ್ವರೂಪದಿಂದ ನಿವೃತ್ತಿ ಘೋಷಣೆ ಮಾಡಿ ಫ್ಯಾನ್ಸ್ ಗಳನ್ನು ಆಶ್ಚರ್ಯಗೊಳಿಸಿದ್ದಾರೆ. ಈಗಾಗಲೇ ಈ ಇಬ್ಬರೂ ಟಿ20 ಮಾದರಿಗೆ ವಿದಾಯ ಹೇಳಿದ್ದು, ಮುಂದಿನ ದಿನಗಳಲ್ಲಿ ಏಕದಿನ ಕ್ರಿಕೆಟ್ ಮಾತ್ರ ಆಡಲು ನಿರ್ಧರಿಸಿದ್ದಾರೆ.
ವಿರಾಟ್ ಕೊಹ್ಲಿ 2027ರ ಏಕದಿನ ವಿಶ್ವಕಪ್ ನಲ್ಲಿ (World Cup) ಆಡಲು ಇಚ್ಛೆ ವ್ಯಕ್ತಪಡಿಸಿದ್ದರು, ಹಾಗೂ ರೋಹಿತ್ ಶರ್ಮಾ ಕೂಡ ಏಕದಿನ ಕ್ರಿಕೇಟಿಗೆ ಹೆಚ್ಚಿನ ಮಹತ್ವ ನೀಡುತ್ತಿದ್ದಾರೆ. ಈ ಕುರಿತು ಫ್ಯಾನ್ಸ್ ಗಳು 2027ರ ವಿಶ್ವಕಪ್ ನಲ್ಲಿ ಅವರು ಇಬ್ಬರೂ ಸೇರಿ ಆಡುತ್ತಾರೆ ಎಂದು ನಿರೀಕ್ಷಿಸಿದ್ದಾರೆ. ಆದರೆ, ಟೀಮ್ ಇಂಡಿಯಾ ಮಾಜಿ ಕ್ರಿಕೆಟಿಗ ಸುನಿಲ್ ಗವಾಸ್ಕರ್ ಅವರ ಹೇಳಿಕೆಗೆ ಕೆಲವರು ಆತಂಕಗೊಳಿಸಿದ್ದಾರೆ.
ಒಂದು ವೇಳೆ ಈ ಇಬ್ಬರಲ್ಲಿ ಸಾಮರ್ಥ್ಯ ಇದ್ದರೆ 2027 ರ ವಿಶ್ವಕಪ್‌ನಲ್ಲಿ ಭಾರತವನ್ನು ಪ್ರತಿನಿಧಿಸುತ್ತಾರೆ. ನಿಜ ಹೇಳಬೇಕೆಂದರೆ… ರೋಹಿತ್ ಮತ್ತು ವಿರಾಟ್ ಕೊಹ್ಲಿ 2027ರ ವಿಶ್ವಕಪ್‌ನಲ್ಲಿ ಆಡಲು ಸಾಧ್ಯವಾಗುವುದಿಲ್ಲ ಎಂದು ನಾನು ಭಾವಿಸುತ್ತೇನೆ.” ಯಾರಿಗೆ ಗೊತ್ತು ಅವರು ಉತ್ತಮ ಪ್ರದರ್ಶನ ನೀಡುತ್ತ ಶತಕಗಳ ಮೇಲೆ ಶತಕಗಳನ್ನು ಬಾರಿಸಿ ಸ್ಥಿರ ಪ್ರದರ್ಶನ ನೀಡಿದರೆ ಆ ದೇವರು ಕೂಡ ಅವರನ್ನು ತಂಡದಿಂದ ತೆಗೆದುಹಾಕಲು ಸಾಧ್ಯವಿಲ್ಲ” ಎಂದು ಗವಾಸ್ಕರ್ ಅಭಿಪ್ರಾಯ ಪಟ್ಟಿದ್ದಾರೆ.