Vijaypur: ಇತ್ತೀಚೆಗೆ ನಡೆದ ಸಾರ್ವಜನಿಕ ಸಭೆಯಲ್ಲಿ ಕಾಂಗ್ರೆಸ್ ಮುಖಂಡ (Congress leader) ರಾಹುಲ್ ಗಾಂಧಿ (Rahul Gandhi) ಅವರನ್ನು ನಿಂದಿಸಿದ ಆರೋಪದ ಮೇಲೆ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ (Basanagowda Patil Yatnal) ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.
ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ದೂರು ದಾಖಲಾಗಿದೆ. ಯತ್ನಾಳ್ ವಿರುದ್ಧ ಪಾಲಿಕೆ ನಾಮನಿರ್ದೇಶಿತ ಸದಸ್ಯ ಪರಶುರಾಮ ಹೊಸಮನಿ ಎಂಬುವವರು ದೂರು ಕೊಟ್ಟಿದ್ದಾರೆ. ಈ ಸಂಬಂಧ ವಿಜಯಪುರದ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅವರ ದೂರಿನ ಆಧಾರದ ಮೇಲೆ, ಯತ್ನಾಳ್ ವಿರುದ್ಧ ಗಾಂಧಿ ಚೌಕ್ ಪೊಲೀಸ್ ಠಾಣೆಯಲ್ಲಿ ಶಾಂತಿ ಕದಡುವ ಉದ್ದೇಶಪೂರ್ವಕ ಅವಮಾನ ಮತ್ತು ಸುಳ್ಳು ಮತ್ತು ತಪ್ಪು ಮಾಹಿತಿ ಹರಡಿದ ಪ್ರಕರಣವನ್ನು ದಾಖಲಿಸಲಾಗಿದೆ.
ಶಾಂತಿ ಸೌಹಾರ್ಧವನ್ನು ಕೆಡಿಸುವ ದುರುದ್ದೇಶದಿಂದ ಸಾರ್ವಜನಿಕವಾಗಿ ಇತರೆ ಧರ್ಮದವರನ್ನು ಹೀಯಾಳಿಸಿ ,ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿ ಎಲ್ಲರಿಗೂ ಮಾನಸಿಕ ನೋವನ್ನುಂಟು ಮಾಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಿದ್ದಾರೆ.