New Delhi: ದೆಹಲಿ ಹೈಕೋರ್ಟ್ ನ್ಯಾಯಾಧೀಶರ (Supreme Court) ವಸತಿ ಬಂಗಲೆಯಲ್ಲಿ ಸಂಭವಿಸಿದ ಬೆಂಕಿ ಅವಘಡ ದೇಶಾದ್ಯಂತ ಚರ್ಚೆಗೆ ಕಾರಣವಾಗಿದೆ. ಈ ಘಟನೆ ನಂತರ ಅಪಾರ ಪ್ರಮಾಣದ ನಗದು ಪತ್ತೆಯಾಗಿದ್ದು, ನ್ಯಾಯಾಂಗ ವಲಯದಲ್ಲಿ ತೀವ್ರ ಕುತೂಹಲ ಮೂಡಿಸಿದೆ.
ನ್ಯಾಯಾಧೀಶರ ಮನೆಯಲ್ಲಿ ಕೋಟ್ಯಂತರ ನಗದು ಸಿಕ್ಕಿರುವ ಹಿನ್ನೆಲೆಯಲ್ಲಿ ಸುಪ್ರೀಂ ಕೋರ್ಟ್ ಕೂಡಲೇ ಕ್ರಮ ಕೈಗೊಂಡಿದ್ದು, ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ನೇತೃತ್ವದ ಕೊಲಿಜಿಯಂ ಈ ನ್ಯಾಯಾಧೀಶರನ್ನು ಬೇರೆ ಹೈಕೋರ್ಟಿಗೆ ವರ್ಗಾಯಿಸಲು ನಿರ್ಧರಿಸಿದೆ.