back to top
26.4 C
Bengaluru
Friday, August 1, 2025
HomeKarnatakaಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ CET Coaching

ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ CET Coaching

- Advertisement -
- Advertisement -

Bengaluru: ಕರ್ನಾಟಕ ಸರ್ಕಾರ (Karnataka government) 2024-25ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಸರ್ಕಾರಿ ಕಾಲೇಜು ವಿದ್ಯಾರ್ಥಿಗಳಿಗೆ CET, NEET ಸೇರಿದಂತೆ ವಿವಿಧ ಕೋರ್ಸ್‌ಗಳ (CET Coaching) ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲಿದೆ.

ಇದಕ್ಕಾಗಿ ಸುಮಾರು 12 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ಪ್ರತಿವರ್ಷ ಕನಿಷ್ಠ 20 ಸಾವಿರ ವಿದ್ಯಾರ್ಥಿಗಳಿಗೆ ತರಬೇತಿಯನ್ನು ನೀಡಲು ಸರ್ಕಾರ ಯೋಜನೆ ರೂಪಿಸಿದೆ.

ಸದ್ಯದ ಮಾಹಿತಿ ಪ್ರಕಾರ ರಾಜ್ಯದ PUC ಕಾಲೇಜುಗಳಲ್ಲಿನ ಸುಮಾರು 25 ಸಾವಿರ ವಿದ್ಯಾರ್ಥಿಗಳಿಗೆ onlone ಮೂಲಕ CET, NEET ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿಯನ್ನು ನೀಡಲಾಗುತ್ತದೆ.

ಇದಕ್ಕಾಗಿ ಮುಂಬೈ ಮೂಲಕ ಸಂಸ್ಥೆಯೊಂದಿಗೆ ಸರ್ಕಾರ ಒಪ್ಪಂದವನ್ನು ಮಾಡಿಕೊಳ್ಳಲಿದೆ.

ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ ಉಚಿತವಾಗಿ ಸಿಇಟಿ, ನೀಟ್‌ ಸೇರಿದಂತೆ ವಿವಿಧ ಕೋರ್ಸ್‌ಗಳ ಪ್ರವೇಶಕ್ಕೆ ಅಗತ್ಯವಾದ ತರಬೇತಿ ನೀಡಲು ಸರ್ಕಾರ ಟೆಂಡರ್ ಕರೆದಿತ್ತು.

ಮಾಹಿತಿಗಳ ಪ್ರಕಾರ ಟೆಂಡರ್‌ನಲ್ಲಿ PACE, Sinhal Online, Gainups Ventures, K-nomics ಕಂಪನಿಗಳು ಭಾಗಿಯಾಗಿದ್ದವು.

ಕರ್ನಾಟಕದ ಶಾಲಾ ಶಿಕ್ಷಣ ಇಲಾಖೆ ವಿದ್ಯಾರ್ಥಿಗಳಿಗೆ ತರಬೇತಿ ನೀಡುವ ಸಂಸ್ಥೆಯೊಂದನ್ನು ಆಯ್ಕೆ ಮಾಡಿದೆ. ಇಲಾಖೆ ಮುಂಬೈ ಮೂಲದ PACE ಸಂಸ್ಥೆ ಕಡಿಮೆ ಬಿಡ್ ಮಾಡಿರುವ ಸಂಸ್ಥೆಯನ್ನು ಆಯ್ಕೆ ಮಾಡಿದೆ.

Online ಮೂಲಕ ಸಿಇಟಿ, ಜೆಇಇ, ನೀಟ್‌ಗೆ ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಿಗೆ 2024-25, 2025-26ನೇ ಶೈಕ್ಷಣಿಕ ವರ್ಷಕ್ಕೆ ತರಬೇತಿ ನೀಡಲಿದೆ.

ಸರ್ಕಾರದ ಈ ತೀರ್ಮಾನವನ್ನು ವಿದ್ಯಾರ್ಥಿಗಳು, ಪೋಷಕರು ಸ್ವಾಗತಿಸಿದ್ದಾರೆ. PACE ಸಂಸ್ಥೆಗೆ ಕೆಲವೇ ದಿನಗಳಲ್ಲಿ ಈ ಕುರಿತು ಅಧಿಕೃತ ಆದೇಶ ಪತ್ರವನ್ನು ನೀಡಲಾಗುತ್ತದೆ.

ಈ ತರಬೇತಿಯ ಭಾಗವಾಗಿ ವಿದ್ಯಾರ್ಥಿಗಳಿಗೆ ಪ್ರತಿ ವಾರವೂ ಪರೀಕ್ಷೆಗಳನ್ನು ನಡೆಸಲಾಗುತ್ತದೆ. ಫಲಿತಾಂಶವನ್ನು ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗುತ್ತದೆ.

ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡುವ ದೃಷ್ಟಿಯಿಂದ ಕನ್ನಡ ಮತ್ತು ಇಂಗ್ಲಿಶ್ ಎರಡೂ ಭಾಷೆಯಲ್ಲಿಯೂ ತರಬೇತಿ ತರಗತಿಗಳನ್ನು ನಡೆಸಲಾಗುತ್ತದೆ.

ಬಜೆಟ್‌ನಲ್ಲಿ ಘೋಷಣೆ ಮಾಡಿದಂತೆ ಈ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುತ್ತಿದೆ. ಮೊದಲ ಬಾರಿಗೆ ಪಿಯು ಕಾಲೇಜುಗಳಲ್ಲಿ ಆನ್‌ಲೈನ್, ಲೈವ್‌ ತರಬೇತಿ ತರಗತಿಗಳನ್ನು ನಡೆಸಲಾಗುತ್ತಿದೆ. ಕಾಲೇಜು ಅವಧಿ ಮುಗಿದ ಬಳಿಕ ಈ ತರಗತಿಗಳು ನಡೆಯಲಿವೆ.

ವಿದ್ಯಾರ್ಥಿಗಳಿಗೆ ನೋಟ್ಸ್‌ಗಳನ್ನು ಸಹ ವಿತರಣೆ ಮಾಡಲಾಗುತ್ತದೆ. ರಾಜ್ಯದ ಸರ್ಕಾರಿ ಕಾಲೇಜುಗಳಲ್ಲಿ ಸುಮಾರು 80 ಸಾವಿರ ವಿದ್ಯಾರ್ಥಿಗಳಿದ್ದಾರೆ.

ಇವರಲ್ಲಿ ಪ್ರಥಮ ಪಿಯುಸಿಯ ಶೇ 50, ದ್ವಿತೀಯ ಪಿಯುಸಿಯ ಶೇ 50 ಸೇರಿಸಿ ಒಟ್ಟು 25 ಸಾವಿರ ವಿದ್ಯಾರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಭವಿಷ್ಯದಲ್ಲಿ ಇನ್ನೂ ಹೆಚ್ಚಿನ ವಿದ್ಯಾರ್ಥಿಗಳಿಗೆ ಈ ಮಾದರಿ ತರಬೇತಿಯನ್ನು ನೀಡಲು ಇಲಾಖೆ ಚಿಂತನೆ ನಡೆಸಿದೆ.

For Daily Updates WhatsApp ‘HI’ to 7406303366

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
Captcha verification failed!
CAPTCHA user score failed. Please contact us!

You cannot copy content of this page