Challakere, Chitradurga : ಚಳ್ಳಕೆರೆಯ ವಾರದ ಸಂತೆ ಮೈದಾನಕ್ಕೆ ತಹಶೀಲ್ದಾರ್ (Tehsildar) ಎನ್.ರಘುಮೂರ್ತಿ ಹಾಗೂ ನಗರಸಭೆ ಸದಸ್ಯರು ಭಾನುವಾರ ಭೇಟಿ ನೀಡಿ Covid-19 ನಿಯಮ ಪಾಲನೆಯಾಗುತ್ತಿದೆಯೇ ಎಂಬುದನ್ನು ಪರಿಶೀಲಿಸಿದರು.
ಸಂತೆಯಲ್ಲಿ ವ್ಯಾಪಾರ ಮಾಡುತ್ತಿದ್ದ ವ್ಯಾಪಾರಿಗಳಿಗೆ ಸ್ಥಳದಲ್ಲೇ ಉಚಿತವಾಗಿ ಮಾಸ್ಕ್ ವಿತರಿಸಿ, ವ್ಯಾಪಾರಿಗಳಿಗೆ ಎಲ್ಲೆಂದರಲ್ಲಿ ಬಿದ್ದಿದ್ದ ಕಸದ ರಾಶಿಯನ್ನು ಸ್ವಚ್ಛಗೊಳಿಸುವಂತೆ ಅಧಿಕಾರಿಗಳು ಸೂಚಿಸಿದರು. ಪೊಲೀಸ್ ಹಾಗೂ ನಗರಸಭೆ ಅಧಿಕಾರಿಗಳಿಗೆ ಕೋವಿಡ್ ನಿಯಮ ಉಲ್ಲಂಘಿಸುವವರ ವಿರುದ್ಧ ಕೂಡಲೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ತಹಶೀಲ್ದಾರ್ ಎನ್.ರಘುಮೂರ್ತಿ ತಿಳಿಸಿದರು
ಪಾವಗಡ ಹಾಗೂ ಚಿತ್ರದುರ್ಗ ರಸ್ತೆಯ ಔಷಧ ಅಂಗಡಿಗಳ ನಾಲ್ಕು ಜನ ಮಾಲೀಕರಿಗೆ ನಿಯಮ ಉಲ್ಲಂಘಿಸಿದ ಕಾರಣ ಸ್ಥಳದಲ್ಲೇ ನೋಟಿಸ್ ಜಾರಿ ಮಾಡಿ ಎಚ್ಚರಿಸಿದರು.
ನಗರಸಭೆ ಸದಸ್ಯೆ ಮಂಜುಳಾ ಆರ್. ಪ್ರಸನ್ನಕುಮಾರ್, ಸಾರ್ವಜನಿಕ ಆರೋಗ್ಯ ಕೇಂದ್ರದ ಅಧಿಕಾರಿ ಪ್ರೇಮಕುಮಾರ್ ಉಪಸ್ಥಿತರಿದ್ದರು.