ಚಾಂಪಿಯನ್ಸ್ ಟ್ರೋಫಿಗೆ (Champions Trophy) ಮುನ್ನ ನಡೆದ ಏಕದಿನ ಸರಣಿಯಲ್ಲಿ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ ಎರಡೂ ತಂಡಗಳು ಹೀನಾಯ ಸೋಲು ಕಂಡಿವೆ. ಇಂಗ್ಲೆಂಡ್ 0-3ರಲ್ಲಿ ಭಾರತಕ್ಕೆ ಸೋತರೆ, ಆಸ್ಟ್ರೇಲಿಯಾ 0-2ರಲ್ಲಿ ಶ್ರೀಲಂಕಾದ ವಿರುದ್ಧ ನಿರಾಶಾದಾಯಕ ಪ್ರದರ್ಶನ ನೀಡಿದೆ.
ಕ್ರಿಕೆಟ್ ಜಗತ್ತಿನ ದೊಡ್ಡ ಪೈಪೋಟಿಗಳಲ್ಲಿ ಭಾರತ-ಪಾಕ್ ಪಂದ್ಯಕ್ಕಿಂತ ಹೊರತುಪಡಿಸಿದರೆ ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಹಣಾಹಣಿ ವಿಶೇಷ. ಲಾಹೋರಿನ ಗಡಾಫಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಚಾಂಪಿಯನ್ಸ್ ಟ್ರೋಫಿ 4ನೇ ಪಂದ್ಯದಲ್ಲಿ ಈ ಪರಂಪರಾಗತ ಪ್ರತಿಸ್ಪರ್ಧಿಗಳು ಮತ್ತೆ ಮುಖಾಮುಖಿಯಾಗುತ್ತಿವೆ.
ಆಸ್ಟ್ರೇಲಿಯಾ ತಂಡಕ್ಕೆ ಪ್ರಮುಖ ವೇಗಿಗಳ ಗೈರುಹಾಜರಿ ದೊಡ್ಡ ಸವಾಲಾಗಿದೆ. ಜೋಶ್ ಹೇಜಲ್ವುಡ್, ಪ್ಯಾಟ್ ಕಮಿನ್ಸ್ ಗಾಯದಿಂದ ಹೊರಗುಳಿದರೆ, ಮಿಚೆಲ್ ಸ್ಟಾರ್ಕ್ ವೈಯಕ್ತಿಕ ಕಾರಣದಿಂದ ಟೂರ್ನಿಯಿಂದ ಹಿಂದೆ ಸರಿದಿದ್ದಾರೆ. ಜೊತೆಗೆ, ಬ್ಯಾಟಿಂಗ್ ವಿಭಾಗದಲ್ಲಿ ಮಿಚೆಲ್ ಮಾರ್ಷ್ ಕೂಡ ಲಭ್ಯವಿಲ್ಲ. ಅನಾನುಭವಿಗಳ ಬೌಲಿಂಗ್ ತಂಡದೊಂದಿಗೆ ಆಸ್ಟ್ರೇಲಿಯಾ ಇಂದು ಕಣಕ್ಕಿಳಿಯಲಿದೆ.
ಹೈವೋಲ್ಟೇಜ್ ಪಂದ್ಯಕ್ಕೆ ಸಜ್ಜಾಗಿರುವ ಇಂಗ್ಲೆಂಡ್ ಮತ್ತು ಆಸ್ಟ್ರೇಲಿಯಾ—ಯಾರು ಮೇಲುಗೈ ಸಾಧಿಸಲಿದ್ದಾರೆ?