back to top
26.3 C
Bengaluru
Thursday, November 21, 2024
HomeKarnatakaBengaluru UrbanCovid-19 ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಧನ ವಿತರಣೆ

Covid-19 ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಧನ ವಿತರಣೆ

- Advertisement -
- Advertisement -

Bengaluru : BBMP ಮತ್ತು ಬೆಂಗಳೂರು ನಗರ ಜಿಲ್ಲಾಡಳಿತ ವತಿಯಿಂದ ಆಯೋಜಿಸಿದ Covid-19 ನಿಂದ ಮೃತಪಟ್ಟ ಕುಟುಂಬದವರಿಗೆ ಪರಿಹಾರ ಧನ ವಿತರಣಾ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಮಾತನಾಡಿದ ಮುಖ್ಯಮಂತ್ರಿಗಳು “ಬೆಂಗಳೂರು ನಗರದ ಚಿತ್ರಣವನ್ನು ಉನ್ನತೀಕರಿಸಲು ಬೆಂಗಳೂರಿನ ಜನಪ್ರತಿನಿಧಿಗಳು ಪಕ್ಷಾತೀತವಾಗಿ ಸಹಕರಿಸಬೇಕು. ಈ ಕುರಿತು ಯೋಜನೆ ರೂಪಿಸಲಾಗುತ್ತಿದ್ದು, ಕೆಲವೇ ದಿನಗಳಲ್ಲಿ ಪ್ರಕಟಿಸಲಾಗುವುದು. ನಿಗದಿತ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳಲಾಗಿದ್ದು, ಬಿಬಿಎಂಪಿ, ಜಲಮಂಡಳಿ ಸೇರಿ ಎಲ್ಲ ಸಾರ್ವಜನಿಕ ಸಂಸ್ಥೆಗಳು ಪರಸ್ಪರ ಸಮನ್ವಯದಿಂದ ಕೆಲಸ ನಿರ್ವಹಿಸುವ ವ್ಯವಸ್ಥೆ ರೂಪಿಸಲಾಗುತ್ತಿದೆ. ರಾಜಕಾಲುವೆ ಒತ್ತುವರಿ ಮಾಡಿ ಕಟ್ಟಡ ನಿರ್ಮಿಸಿದವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಕೋವಿಡ್‌ನಿಂದ ಮನೆಯ ಸದಸ್ಯರನ್ನು ಕಳೆದುಕೊಂಡ ಬಿಪಿಎಲ್‌ ಕುಟುಂಬಗಳಿಗೆ ತಲಾ ₹1 ಲಕ್ಷ ಪರಿಹಾರ ನೀಡಲು ₹300 ಕೋಟಿ ಬಿಡುಗಡೆಗೊಳ್ಳಿಸಿದ್ದೇವೆ. ಪ್ರಸ್ತುತ ಕೆಲವರಿಗೆ ಪರಿಹಾರ ನೀಡುತ್ತಿದ್ದು ಉಳಿದವರಿಗೆ 8 ರಿಂದ 10 ದಿನಗಳಲ್ಲಿ ವಿತರಣೆ ಮಾಡಲಾಗುವುದು” ಎಂದು ಹೇಳಿದರು.

ಮೂರನೇ ಅಲೆ ಬಂದರೆ ಎದುರಿಸಲು ಎಲ್ಲ ರೀತಿಯಲ್ಲೂ ಸರ್ಕಾರ ಸಿದ್ಧವಾಗಿದೆ. ಬೆಂಗಳೂರು ನಗರ ಮತ್ತು ಪ್ರತಿ ಜಿಲ್ಲಾ ಕೇಂದ್ರಗಳು ಸೇರಿ 100ಕ್ಕೂ ಹೆಚ್ಚು RT-PCR ಪರೀಕ್ಷೆ ನಡೆಸುವ ಘಟಕಗಳನ್ನು ನಿರ್ಮಿಸಲಾಗಿದೆ. ರಾಜ್ಯದಲ್ಲಿ ಶೇ 97ರಷ್ಟು ಜನರಿಗೆ ಮೊದಲ ಡೋಸ್ (First Dose) ಮತ್ತು ಶೇ 76ರಷ್ಟು ಜನರಿಗೆ ಎರಡನೇ ಡೋಸ್ (Second Dose) ಲಸಿಕೆ ನೀಡಲಾಗಿದ್ದು, ಗ್ರಾಮೀಣ ಪ್ರದೇಶ ಮತ್ತು ಕೆಲ ಸಮುದಾಯದಲ್ಲಿ ಲಸಿಕೆ (Vaccine) ಬಗ್ಗೆ ತಿಳಿವಳಿಕೆ ಕಡಿಮೆ ಇದೆ. ಅವರಿಗೆ ಜಾಗೃತಿ ಮೂಡಿಸಲು ಸ್ಥಳೀಯ ಜನಪ್ರತಿನಿಧಿಗಳು ಸಹಕಾರ ನೀಡಬೇಕು ಎಂದು ಮುಖ್ಯಮಂತ್ರಿಗಳು ತಿಳಿಸಿದರು.

ಕೇಂದ್ರ ಸರ್ಕಾರದಿಂದ ತಲಾ ₹50 ಸಾವಿರ ಪರಿಹಾರ ನೀಡಲಾಗುತ್ತಿದೆ. ರಾಜ್ಯ ಸರ್ಕಾರ BPL ಕುಟುಂಬಕ್ಕೆ ಮಾತ್ರ ₹1 ಲಕ್ಷ ಸೇರಿಸಿ ಒಟ್ಟು ₹1.50 ಲಕ್ಷ ಕೊಡುತ್ತಿದ್ದು ಈ ಒಂದು ಲಕ್ಷವನ್ನು APL ಕುಟುಂಬಕ್ಕೂ ನೀಡಬೇಕು’ ಎಂದು ಶಾಸಕ ಬಿ.ಝಡ್‌. ಜಮೀರ್ ಅಹಮ್ಮದ್ (B. Z. Zameer Ahmed Khan) ಮುಖ್ಯಮಂತ್ರಿಗಳಿಗೆ ಮನವಿ ಮಾಡಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ “ಹಣಕಾಸಿನ ಸ್ಥಿತಿಗತಿ ನೋಡಿಕೊಂಡು ಸಕಾರಾತ್ಮಕ ತೀರ್ಮಾನ ಕೈಗೊಳ್ಳುತ್ತೇವೆ” ಎಂದರು.

ಕಾರ್ಯಕ್ರಮದಲ್ಲಿ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತ, ಆರೋಗ್ಯ ಸಚಿವ ಡಾ. ಕೆ. ಸುಧಾಕರ್ (Dr. K. Sudhakar), ಕಂದಾಯ ಸಚಿವ ಆರ್.ಅಶೋಕ್ (R. Ashoka), ಸಚಿವರಾದ ಕೆ.ಗೋಪಾಲಯ್ಯ (K. Gopalaiah), ಎಸ್.ಟಿ ಸೋಮಶೇಖರ್ (S. T. Somashekhar), ಶಾಸಕ ಎಲ್‌.ಎ. ರವಿಸುಬ್ರಹ್ಮಣ್ಯ (L. A. Ravi Subramanya), ವಿಧಾನ ಪರಿಷತ್ ಸದಸ್ಯ ಯು.ಬಿ ವೆಂಕಟೇಶ್ (U. B. Venkatesh), ಶಾಸಕರಾದ ಆರ್.ಮಂಜುನಾಥ್ (R Manjunath), ಸತೀಶ್ ರೆಡ್ಡಿ (M. Satish Reddy) ಪಾಲ್ಗೊಂಡಿದ್ದರು.

- Advertisement -
Latest news
- Advertisement -
Related news
- Advertisement -

LEAVE A REPLY

Please enter your comment!
Please enter your name here
This site is protected by reCAPTCHA and the Google Privacy Policy and Terms of Service apply.

The reCAPTCHA verification period has expired. Please reload the page.
Captcha verification failed!
CAPTCHA user score failed. Please contact us!

You cannot copy content of this page