Chikkaballapur : ಚಿಕ್ಕಬಳ್ಳಾಪುರ ತಾಲ್ಲೂಕಿನ ನಂದಿ ಹೋಬಳಿಯ ಕೊಲಮೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆ ಮತ್ತು ಪೆರೇಸಂದ್ರದ ಅಲ್ಪಸಂಖ್ಯಾತರ ವಸತಿ ಶಾಲೆಗಳಿಗೆ ಭಾನುವಾರ ಜಿಲ್ಲಾಧಿಕಾರಿ (District Commissioner) ಪಿ.ಎನ್.ರವೀಂದ್ರ (P N Ravindra) ಅನಿರೀಕ್ಷಿತ ಭೇಟಿ (Surprise Visit to Hostel) ನೀಡಿದರು. ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿ ವಸತಿ ಶಾಲೆಗಳ ಸಮಸ್ಯೆಗಳ ಬಗ್ಗೆ ಅಹವಾಲು ಸ್ವೀಕರಿಸಿದರು. ಅಡುಗೆ ಮನೆಗೆ ತೆರಳಿ ಸ್ವಚ್ಛತೆ ಮತ್ತು ಆಹಾರ ತಯಾರಿಕೆಯ ಗುಣಮಟ್ಟ ಪರಿಶೀಲಿಸಿದರು.
ಕೊಲಮೇನಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ರಸ್ತೆ, ಕಾಂಪೌಂಡ್ ಮತ್ತು ಮಂಚ ಹಾಗೂ ಹಾಸಿಗೆ ಸೌಲಭ್ಯ ನೀಡಬೇಕಾಗಿದೆ. ಪೆರೆಸಂದ್ರ ಅಲ್ಪಸಂಖ್ಯಾತ ವಸತಿ ಶಾಲೆಗೆ ಕ್ರೀಡಾಂಗಣ ಬೇಕು ಎಂದು ವಿದ್ಯಾರ್ಥಿಗಳು ಮನವಿ ಸಲ್ಲಿಸಿದ್ದಾಗ ಸೌಲಭ್ಯಗಳನ್ನು ಒದಗಿಸಿಕೊಡುವುದಾಗಿ ಜಿಲ್ಲಾಧಿಕಾರಿ ಭರವಸೆ ನೀಡಿ ವಿದ್ಯಾರ್ಥಿಗಳು ಶ್ರದ್ಧೆಯಿಂದ ಅಭ್ಯಾಸ ಮಾಡಬೇಕು ಎಂದು ಕಿವಿಮಾತು ಹೇಳಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಕಾಶ್.ಜಿ.ಟಿ ನಿಟ್ಟಾಲಿ, ವಿದ್ಯಾರ್ಥಿ ನಿಲಯಗಳ ಮೇಲ್ವಿಚಾರಕರು, ಸಿಬ್ಬಂದಿ ಈ ಸಂಧರ್ಭದಲ್ಲಿ ಹಾಜರಿದ್ದರು.
For Daily Updates WhatsApp ‘HI’ to 7406303366
The post ಹಾಸ್ಟೆಲ್‌ಗೆ ಅನಿರೀಕ್ಷಿತ ಭೇಟಿ ನೀಡಿದ ಜಿಲ್ಲಾಧಿಕಾರಿಗಳು appeared first on Chikkaballapur | Chikballapur | Chikkaballapura | ಚಿಕ್ಕಬಳ್ಳಾಪುರ ಸುದ್ದಿ.